'ಸೀಮಿತ ದಾಳಿ ಸಾಕ್ಷ್ಯ ವಿವಾದ': ಭಾರತೀಯ ಸೇನೆ, ಸರ್ಕಾರದ ಮೇಲೆ ನಂಬಿಕೆಯಿಡಿ- ಕಿರಣ್ ರಿಜಿಜು
ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಡಿ ಎಂದು ದೇಶದ ಜನತೆಗೆ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಬುಧವಾರ...

ನವದೆಹಲಿ: ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಡಿ ಎಂದು ದೇಶದ ಜನತೆಗೆ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಬುಧವಾರ ಹೇಳಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿರುವ ಕುರಿತಂತೆ ಸಾಕ್ಷ್ಯ ಒದಗಿಸಬೇಕೆಂಬ ಪ್ರತಿಪಕ್ಷಗಳ ಟೀಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯ ಸೇನೆ ಮೇಲೆ ಸಂಪೂರ್ಣ ವಿಶ್ವಾಸವಿಡಿ ಹಾಗೂ ಟೀಕೆಗಳು, ಸಾಕ್ಷ್ಯಗಳನ್ನು ಕೇಂದ್ರ ಸರ್ಕಾರಕ್ಕೆ ಬಿಟ್ಟುಬಿಡಿ ಎಂದು ಹೇಳಿದ್ದಾರೆ.
ಸೇನೆ ಸೀಮಿತ ದಾಳಿ ನಡೆಸಿದಾಗ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಯನ್ನು ಹಾಡಿಹೊಗಳಿದ್ದ ಪ್ರತಿಪಕ್ಷಗಳು ಇದೀಗ ನಿಧಾನಗತಿಯಲ್ಲಿ ಸೀಮಿತ ದಾಳಿ ಕುರಿತಂತೆ ರಾಜಕೀಯ ಕೆಸರೆಚಾಟ ಆಡಲು ಆರಂಭ ಮಾಡಿವೆ, ಸೀಮಿತ ದಾಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಕೆಲ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಸೇನೆ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ದಾಳಿ ಕುರಿತ ವಿಡಿಯೋವನ್ನು ಇದೀಗ ಕೇಂದ್ರಕ್ಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


