ದೇಶ

ಸೇನೆಗೆ ಅಗೌರವ ತೋರಿದ ಕೇಜ್ರಿವಾಲ್, ನಿರುಪಮ್'ರನ್ನು ಭಾರತ ಎಂದಿಗೂ ಕ್ಷಮಿಸೋಲ್ಲ: ಧರ್ಮೇಂದ್ರ ಪ್ರಧಾನ್

ಸೀಮಿತ ದಾಳಿ ಕುರಿತಂತೆ ಭಾರತೀಯ ಸೇನೆಗೆ ಅಗೌರವ ತೋರಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಅವರನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ...

ಸೇನೆಗೆ ಅಗೌರವ ತೋರಿದ ಕೇಜ್ರಿವಾಲ್, ನಿರುಪಮ್'ರನ್ನು ಭಾರತ ಎಂದಿಗೂ ಕ್ಷಮಿಸೋಲ್ಲ: ಧರ್ಮೇಂದ್ರ ಪ್ರಧಾನ್
ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್
Published On :

ನವದೆಹಲಿ: ಸೀಮಿತ ದಾಳಿ ಕುರಿತಂತೆ ಭಾರತೀಯ ಸೇನೆಗೆ ಅಗೌರವ ತೋರಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಅವರನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಉಗ್ರ ನೆಲೆಗಳ ಸೀಮಿತ ದಾಳಿ ನಡೆಸಿದ ಭಾರತೀಯ ಸೇನೆಯ ಸಾಧನೆಯನ್ನು ಜೀರ್ಣಿಸಿಕೊಳ್ಳಲು ಇಬ್ಬರು ನಾಯಕರಿಗೂ ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಈ ರೀತಿಯಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಭಾರತೀಯ ಸೇನೆಯ ಸಾಧನೆಯನ್ನು ಸಂಭ್ರವಿಸುವುದನ್ನು ಬಿಟ್ಟು ಇಬ್ಬರು ನಾಯಕರು ಪಾಕಿಸ್ತಾನ ಮಾಧ್ಯಮಗಳಲ್ಲಿ ಹೆಡ್ಲೈನ್ ಆಗುತ್ತಿದ್ದಾರೆಂದು ಹೇಳಿದ್ದಾರೆ.

ಇಬ್ಬರೂ ನಾಯಕರೂ ಭಾರತೀಯ ಸೇನೆಗೆ ಗೌರವವನ್ನು ಸೂಚಿಸುತ್ತಿಲ್ಲ. ಬದಲಿಗೆ ಪಾಕಿಸ್ತಾನದ ಎಷ್ಟು ಪತ್ರಿಕೆಗಳಲ್ಲಿ ನಮ್ಮ ಸುದ್ದಿ ಬಂದಿದೆ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಸೇನೆಗೆ ಅಗೌರವ ಸೂಚಿಸಿದ ಈ ಇಬ್ಬರೂ ನಾಯಕರನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.