ದೇಶ

ಸೇನೆಯ ಸರ್ಜಿಕಲ್ ಸ್ಟ್ರೈಕ್ ಸಾಕ್ಷ್ಯ ಕೇಳಿದ ಕೇಜ್ರಿವಾಲ್‌ಗೆ ಅಣ್ಣಾ ಹಜಾರೆ ತರಾಟೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ನೀಡುವಂತೆ ಆಗ್ರಹಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...

ಸೇನೆಯ ಸರ್ಜಿಕಲ್ ಸ್ಟ್ರೈಕ್ ಸಾಕ್ಷ್ಯ ಕೇಳಿದ ಕೇಜ್ರಿವಾಲ್‌ಗೆ ಅಣ್ಣಾ ಹಜಾರೆ ತರಾಟೆ
ಅಣ್ಣಾ ಹಜಾರೆ-ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ನೀಡುವಂತೆ ಆಗ್ರಹಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಅಣ್ಣಾ ಹಜಾರೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತೀಯ ಸೇನೆ ವಿರುದ್ಧದ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಯನ್ನು ಅಣ್ಣಾ ಹಜಾರೆ ತೀವ್ರವಾಗಿ ಖಂಡಿಸಿದ್ದು, ಸೇನೆ ಮೇಲೆ ಯಾರು ಅನುಮಾನ ಪಡುವುದಿಲ್ಲ. ಭಾರತೀಯ ಸೇನೆಯ ಮೇಲೆ ಮಕ್ಕಳಿಂದ ಹಿರಿಯರವರೆಗೆ ಗೌರವ ಮತ್ತು ಭರವಸೆ ಇದೆ ಎಂದು ಹೇಳಿದ್ದಾರೆ.

ಕಳೆದ ವಾರ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಸೀಮಿತ ದಾಳಿಯಲ್ಲಿ 7 ಉಗ್ರರ ಶಿಬಿರವನ್ನು ದ್ವಂಸಗೊಳಿಸಿದ್ದರು. ಈ ದಾಳಿಯಲ್ಲಿ ಸುಮಾರು 40 ಉಗ್ರರನ್ನು ಸೇನೆ ಹತ್ಯೆಗೈದಿತ್ತು. ಈ ಬಗ್ಗೆ ಪುರಾವೆ ಒದಗಿಸಬೇಕು ಎಂದು ಕೇಜ್ರಿವಾಲ್ ಪ್ರಧಾನಿಯನ್ನು ಒತ್ತಾಯಿಸಿದ್ದು ಕೇಜ್ರಿ ಅವರ ಈ ವಿವಾದಾತ್ಮಕ ಹೇಳಿಕೆಯಿಂದ ದೇಶ-ವಿದೇಶಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.