ಕಂದಕಕ್ಕೆ ಉರುಳಿದ ಬಸ್: 4 ಸಾವು, 51 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ 51 ಜನರಿಗೆ ಗಾಯವಾಗಿರುವ ಘಟನೆ...

ಉಧಂಪುರ: ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ 51 ಜನರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.
ಉಧಂಪುರದಿಂದ ಘೋರ್ಡಿಗೆ ಹೋಗುತ್ತಿದ್ದ ಖಾಸಗಿ ಬಸ್ ಬರ್ಮೀನ್ ಪ್ರದೇಶದ ಬಳಿ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿದೆ. ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 51 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಪ್ರಮುಖ ಕಾರಣ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


