ಬಿಹಾರದಲ್ಲಿ ಐವರು ಶಂಕಿತ ಉಗ್ರರ ಬಂಧನ, ತೀವ್ರ ವಿಚಾರಣೆ
ಅತ್ತ ಇಂಡೋ-ಪಾಕ್ ಗಡಿಯಲ್ಲಿ ಉಗ್ರರು ಭಾರತೀಯ ಸೈನಿಕರ ವಿರುದ್ಧ ದಾಳಿ ಮುಂದುವರೆಸಿರುವಂತೆಯೇ ಇತ್ತ ಬಿಹಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐಎ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಅತ್ತ ಇಂಡೋ-ಪಾಕ್ ಗಡಿಯಲ್ಲಿ ಉಗ್ರರು ಭಾರತೀಯ ಸೈನಿಕರ ವಿರುದ್ಧ ದಾಳಿ ಮುಂದುವರೆಸಿರುವಂತೆಯೇ ಇತ್ತ ಬಿಹಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐಎ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಭದ್ರತಾ ಮೂಲಗಳ ಪ್ರಕಾರ ಬಿಹಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನೇಪಾಳ ಮಾರ್ಗವಾಗಿ ಭಾರತದೊಳಗೆ ಈ ಐವರು ಶಂಕಿತ ಉಗ್ರರು ನುಸುಳಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಐವರ ಪೈಕಿ ಇಬ್ಬರು ಪಾಕಿಸ್ತಾನ ಮೂಲದ ಶಂಕಿತರು ಎಂದು ಹೇಳಲಾಗುತ್ತಿದ್ದು, ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಪ್ರಸ್ತುತ ಬಂಧಿತ ಶಂಕಿತ ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


