ದ್ವಾರಕಾ ದೇವಾಲಯದ ಮೇಲೆ ಉಗ್ರರ ದಾಳಿ ಎಚ್ಚರಿಕೆ: ಹೆಚ್ಚಿನ ಭದ್ರತೆ
ಭಯೋತ್ಪಾದಕರು ದ್ವಾರಕಾ ದೇವಾಲಯದ ಮೇಲೆ ದಾಳಿ ನಡೆಸುವ ಸಾಧ್ಯತೆ ಇದ್ದು ಭದ್ರತೆಯನ್ನು ಹೆಚ್ಚಿಸಲಾಗಿದೆ.

ಅಹಮದಾಬಾದ್: ಉರಿ ಸೇನಾ ಸೆಕ್ಟರ್ ನಲ್ಲಿ ಭಯೋತ್ಪಾದಕ ದಾಳಿ ಹಾಗೂ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ನಡೆಸಿದ ಬೆನ್ನಲ್ಲೇ ಭಯೋತ್ಪಾದಕರು ದ್ವಾರಕಾ ದೇವಾಲಯದ ಮೇಲೆ ದಾಳಿ ನಡೆಸುವ ಸಾಧ್ಯತೆ ಇದ್ದು ಭದ್ರತೆಯನ್ನು ಹೆಚ್ಚಿಸಲಾಗಿದೆ.
ದ್ವಾರಕಾ ದೇವಾಲಯದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಐಎಸ್ಐ ದಾಳಿಕೋರರನ್ನು ಕಳಿಸಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ದೇವಾಲಯದ ಬಳಿ ಭದ್ರತೆ ಕೈಗೊಳ್ಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದ್ವಾರಕಾದ ಕಡಲ ತೀರದ ನಗರಗಳು ಹಾಗೂ ಮಂಡಲಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಗುಜರಾತ್ ಡಿಜಿಪಿ ತಿಳಿಸಿದ್ದಾರೆ. 12 ರಿಂದ 15 ಜನರ ಐಎಸ್ಐ ನ ಉಗ್ರರು ಗುಜರಾತ್ ನಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ. ಉಗ್ರರು ಈಗಾಗಲೇ ದ್ವಾರಕಾದಲ್ಲಿ ಬಂದಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಇದೆ ವೇಳೆ ಅಂತಾರಾಷ್ಟ್ರೀಯ ಜಲಗಡಿ ಪ್ರದೇಶದಲ್ಲಿ ಎರಡು ದೋಣಿಗಳು ಭಾರತದೊಳಗೆ ಪ್ರವೇಶ ಮಾಡಲು ಸಿದ್ಧವಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಇದಕ್ಕೂ ಮುನ್ನ ಶನಿವಾರ ಗುಜರಾತ್ ನ ಭಯೋತ್ಪಾದಕ ನಿಗ್ರಹ ದಳ ಜೈಶ್-ಎ-ಮೊಹಮ್ಮದ್(ಜೆಇಎಂ) ಉಗ್ರ ಹಸನ್ ಇಮಾಮುದ್ದೀನ್ ನನ್ನ ಬಿಹಾರದ ಔರಂಗಾಬಾದ್ ನಲ್ಲಿ ಬಂಧಿಸಿತ್ತು. ಇಮಾಮುದ್ದೀನ್ ವಿಚಾರಣೆ ಮೂಲಕ ದ್ವಾರಕಾ ನಗರದ ಮೇಲೆ ದಾಳಿ ನಡೆಸುವ ಉಗ್ರರರ ಯೋಜನೆ ಬಗ್ಗೆ ಮಾಹಿತಿ ಪಡೆಯಲು ಗುಜರಾತ್ ನ ಎಟಿಎಸ್ ಅಧಿಕಾರಿಗಳು ಯತ್ನಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


