ದೇಶ

"ಸಾರ್ವಜನಿಕ ಹಿತಾಸಕ್ತಿಯಲ್ಲ, ಸ್ವಹಿತಾಸಕ್ತಿ": ಟ್ರಾಫಿಕ್ ರಾಮಸ್ವಾಮಿಗೆ ಹೈಕೋರ್ಟ್ ಚಾಟಿ

ಅನಾರೋಗ್ಯಕ್ಕೀಡಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಕುರಿತು ಮಾಹಿತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

"ಸಾರ್ವಜನಿಕ ಹಿತಾಸಕ್ತಿಯಲ್ಲ, ಸ್ವಹಿತಾಸಕ್ತಿ": ಟ್ರಾಫಿಕ್ ರಾಮಸ್ವಾಮಿಗೆ ಹೈಕೋರ್ಟ್ ಚಾಟಿ
ಮದ್ರಾಸ್ ಹೈಕೋರ್ಟ್ ಮತ್ತು ಸಿಎಂ ಜಯಲಲಿತಾ (ಸಂಗ್ರಹ ಚಿತ್ರ)
Published On :

ಚೆನ್ನೈ: ಅನಾರೋಗ್ಯಕ್ಕೀಡಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಕುರಿತು ಮಾಹಿತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ  ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಕುರಿತು ಹಲವು ಊಹೋಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಕೋರಿ ಟ್ರಾಫಿಕ್  ರಾಮಸ್ವಾಮಿ ಎಂಬುವವರ ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಅರ್ಜಿದಾರರನ್ನೇ ತರಾಟೆಗೆ ತೆಗೆದುಕೊಂಡಿತು. ಟ್ರಾಫಿಕ್ ರಾಮಸ್ವಾಮಿ ಅವರ ಅರ್ಜಿ  ಸಾರ್ವಜನಿಕ ಹಿತಾಸಕ್ತಿಯಿಂದ ಸಲ್ಲಿಕೆಯಾಗಿಲ್ಲ. ಬದಲಿಕೆ ಪ್ರಚಾರಕ್ಕಾಗಿ ಸಲ್ಲಿಕೆಯಾದ ಅರ್ಜಿಯಾಗಿದೆ ಎಂದು ಹೇಳಿ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದರು.

ಇದಕ್ಕೂ ಮೊದಲು ನಡೆದ ವಾದ-ಪ್ರತಿವಾದದಲ್ಲಿ ಸರ್ಕಾರದ ಪರ ವಕೀಲರು ಟ್ರಾಫಿಕ್ ರಾಮಸ್ವಾಮಿ ಅವರ ಅರ್ಜಿಯನ್ನು ದುರುದ್ದೇಶ ಪೂರಕವಾಗಿದೆ ಎಂದು ವಾದಿಸಿದ್ದರು. ತಮಿಳುನಾಡು  ಮುಖ್ಯಮಂತ್ರಿ ಆರೋಗ್ಯದ ಕುರಿತು ಚಿಕಿತ್ಸೆ ನೀಡುತ್ತಿರುವ ಅಪೋಲೋ ಆಸ್ಪತ್ರೆ ವೈದ್ಯರೇ ಆಗ್ಗಿಂದಾಗ್ಗೇ ಮಾಧ್ಯಮ ಪ್ರಕಟಣೆ ನೀಡುತ್ತಿದ್ದರೂ, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡುವ  ಮೂಲಕ ಪ್ರಕರಣವನ್ನು ತಮ್ಮ ದುರುದ್ದೇಶಕ್ಕೆ ಬಳಸಿಕೊಳ್ಳಲು ಅರ್ಜಿದಾರರು ಯತ್ನಿಸುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಮನ್ನಣೆ ನೀಡಿದ ನ್ಯಾಯಾಲಯ  ಟ್ರಾಫಿಕ್ ರಾಮಸ್ವಾಮಿ ಅವರ ಅರ್ಜಿಯನ್ನು ವಜಾಗೊಳಿಸಿತು.

ತಮಿಳುನಾಡು ಸಿಎಂ ಜಯಲಲಿತಾ ಅವರನ್ನು ಸೆಪ್ಟೆಂಬರ್ 22ರಂದು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಇದೆ  ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.