ಪ್ರಧಾನಿ ನರೇಂದ್ರ ಮೋದಿ ಸೈನಿಕರ ರಕ್ತದ ಹಿಂದೆ ಅಡಗಿದ್ದಾರೆ: ರಾಹುಲ್ ಗಾಂಧಿ
ಭಾರತೀಯ ಸೇನೆ ಪಿಒಕೆಯಲ್ಲಿ ನಡೆಸಿರುವ ಸೀಮಿತ ದಾಳಿ ರಾಜಕೀಯ ವಿಷಯವಾಗಿ ಪರಿವರ್ತನೆಗೊಳ್ಳುತ್ತಿರುವುದು ಸ್ಪಷ್ಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಭಾರತೀಯ ಸೇನೆ ಪಿಒಕೆಯಲ್ಲಿ ನಡೆಸಿರುವ ಸೀಮಿತ ದಾಳಿ ರಾಜಕೀಯ ವಿಷಯವಾಗಿ ಪರಿವರ್ತನೆಗೊಳ್ಳುತ್ತಿರುವುದು ಸ್ಪಷ್ಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಿಸಾನ್ ಯಾತ್ರೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ರಕ್ತದ ಹಿಂದೆ ಅಡಗಿ ಕುಳಿತಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಸೀಮಿತ ದಾಳಿ ನಡೆಸಿದ್ದ ಭಾರತೀಯ ಯೋಧರ ರಕ್ತದೊಂದಿಗೆ 'ದಲ್ಲಾಳಿ' ಕೆಲ್ಸಾ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸೀಮಿತ ದಾಳಿ ನಡೆಸಿರುವ ನಮ್ಮ ಸೈನಿಕರು ರಕ್ತ ನೀಡಿದ್ದಾರೆ, ಆದರೆ ನೀವು ಸೈನಿಕರ ರಕ್ತದ ಹಿಂದೆ ಅಡಗಿ ಕುಳಿತಿದ್ದೀರಿ ಎಂದು ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಇದೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಡಕುಂಟು ಮಾಡುವ ನಾಯಕ ಎಂದಿರುವ ರಾಹುಲ್ ಗಾಂಧಿ, ಚುನಾವಣೆಗೂ ಮುನ್ನ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಜಮಾ ಮಾಡುವುದಾಗಿ ಭರವಸೆ ನೀಡಿದ್ದರು, ಆ ಭರವಸೆ ಈ ವರೆಗೂ ಈಡೇರಿಲ್ಲ, ದೇಶದ ಜನತೆ ಪ್ರಧಾನಿ ಮೋದಿ ಅವರಿಂದ ನ್ಯಾಯ ಬಯಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತೀಯ ಸೇನೆ ಸೀಮಿತ ದಾಳಿ ನಡೆಸಿರುವುದನ್ನು ಸ್ಪಷ್ಟಪಡಿಸಲು ದಾಖಲೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ನೀಡಿದ್ದ ಹೇಳಿಕೆ ಬಳಿಕ ರಾಹುಲ್ ಗಾಂಧಿ ಸಹ ಸೇನಾ ಕಾರ್ಯಾಚರಣೆ ವಿಷಯವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


