ಸರ್ಜಿಕಲ್ ಸ್ಟ್ರೈಕ್ ನ್ನು ಬಹಿರಂಗಪಡಿಸಿದ್ದು ಸೇನೆ, ರಕ್ಷಣಾ ಸಚಿವರಲ್ಲ: ಅಮಿತ್ ಶಾ
ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ ಲಾಂಚಿಂಗ್ ಪ್ಯಾಡ್ ಮೇಲೆ ನಡೆಸಲಾದ...

Published On :
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ ಲಾಂಚಿಂಗ್ ಪ್ಯಾಡ್ ಮೇಲೆ ನಡೆಸಲಾದ ಸೀಮಿತ ದಾಳಿಯ ಘೋಷಣೆ ಮಾಡುವುದನ್ನು ಸರ್ಕಾರ ಸೇನೆಗೇ ಬಿಟ್ಟುಕೊಟ್ಟಿತ್ತು. ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕಳೆದ ವಾರ ಸೈನಿಕರು ಪ್ರಯಾಣಿಸುತ್ತಿದ್ದಾರೆ ಎಂದು ಮಿಲಿಟರಿ ಕಾರ್ಯಾಚರಣೆಯ ಮಹಾ ನಿರ್ದೇಶಕರು ಮಾಧ್ಯಮದವರಿಗೆ ವಿವರಿಸಿದರೇ ಹೊರತು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಸರ್ಜಿಕಲ್ ಸ್ಟ್ರೈಕ್ ಸ್ವತಃ ಮಿಲಿಟರಿ ನಡೆಸಿದ ಕಾರ್ಯಾಚರಣೆಯಲ್ಲ, ರಾಜಕೀಯ ಪ್ರೇರಿತ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ.ಇದು ಸಂಪೂರ್ಣವಾಗಿ ಸೇನೆಯ ಸಾಧನೆಯಾಗಿದ್ದು, ನಿರ್ಣಯ ಮತ್ತು ರಾಜಕೀಯ ಉದ್ದೇಶ ಪ್ರಧಾನಿ ಮೋದಿಯವರದ್ದು ಎಂದರು.
ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿರುವುದರಿಂದ ತಮ್ಮ ಪಕ್ಷದ ಚುನಾವಣಾ ಪ್ರಚಾರದಲ್ಲಿ ಸರ್ಜಿಕಲ್ ಸ್ಟ್ರೈಕ್ ನ ಛಾಯೆ ಇರಬಹುದೇ ಎಂಬ ಪ್ರಶ್ನೆಯನ್ನು ಅವರು ನಿರಾಕರಿಸಲಿಲ್ಲ. ನಾವು ಈ ವಿಷಯವನ್ನು ಹೊತ್ತುಕೊಂಡು ಜನರ ಬಳಿಗೆ ಹೋಗುತ್ತೇವೆ ಏಕೆಂದರೆ ಪ್ರತಿ ಜವಾಬ್ದಾರಿಯುತ ಪಕ್ಷ ಸೇನೆಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.
ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಆರಂಭದಲ್ಲಿ ಸರ್ಜಿಕಲ್ ಸ್ಟ್ರೈಕ್ ಗೆ ಪ್ರಧಾನಿ ಮೋದಿಯನ್ನು ಹೊಗಳಿ ನಂತರ ರಾಜಕೀಯ ಲಾಭ ಪಡೆಯಲು ಸೇನೆಗೆ ನಿರ್ದೇಶನ ನೀಡಿ ದಾಳಿ ಮಾಡಿಸಿದ್ದಾರೆ ಎಂದು ಹೇಳಿದ್ದರು. ಭಾರತದ ಕಡೆಯಿಂದ ಸರ್ಜಿಕಲ್ ಸ್ಟ್ರೈಕ್ ಆಗಿದೆ ಎಂಬ ಹೇಳಿಕೆಯನ್ನು ಪಾಕಿಸ್ತಾನ ನಿರಾಕರಿಸಿದ ನಂತರ ವಿರೋಧ ಪಕ್ಷಗಳೂ ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಬಗ್ಗೆ ಸಾಕ್ಷ್ಯ ನೀಡಿ ಎಂದು ಹೇಳಿವೆ.
ದಾಳಿಯನ್ನು ರಾಜಕೀಯಗೊಳಿಸುವುದನ್ನು ನಾವು ಖಂಡಿಸುತ್ತೇವೆ ಎಂದು ಅವರು ಹೇಳಿದರು.
ಸರ್ಜಿಕಲ್ ಸ್ಟ್ರೈಕ್ ನ್ನು ವೈಭವೀಕರಿಸದಂತೆ ಪ್ರಧಾನಿ ಮೋದಿ ತಮ್ಮ ಸಂಪುಟದ ಸಚಿವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಉನ್ನತ ನಾಯಕರು ಹೀರೋಗಳು ಎನ್ನುವ ರೀತಿಯಲ್ಲಿ ಪೋಸ್ಟರ್ ಗಳು, ಭಿತ್ತಿ ಪತ್ರಗಳಲ್ಲಿ ರಾರಾಜಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


