ದೇಶ

ಉಗ್ರ ದಾಳಿ ಭೀತಿ: ದೆಹಲಿ ಸೇರಿದಂತೆ 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

ದೆಹಲಿ, ಪಂಜಾಬ್ ಹಾಗೂ ಗುಜರಾತ್ ಸೇರಿದಂತೆ ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ಉಗ್ರ ದಾಳಿ ನಡೆಯುವು ಕುರಿತು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಗ್ರ ದಾಳಿ ಭೀತಿ: ದೆಹಲಿ ಸೇರಿದಂತೆ 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್
ದೆಹಲಿ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
Published On :

ನವದೆಹಲಿ: ದೆಹಲಿ, ಪಂಜಾಬ್ ಹಾಗೂ ಗುಜರಾತ್ ಸೇರಿದಂತೆ ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ಉಗ್ರ ದಾಳಿ ನಡೆಯುವು ಕುರಿತು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ  ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಮುಖವಾಗಿ ದೆಹಲಿ. ಅಹ್ಮದಾಬಾದ್ ಸೇರಿದಂತೆ ದೇಶದ 22 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ  ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ವ್ಯಾಪಕ ಭದ್ರತೆ ಒದಗಿಸಲಾಗಿದೆ. ಕಣಿವೆ  ರಾಜ್ಯ ಜಮ್ಮು ಮತ್ತು ಕಾಶ್ಮೀರ, ಗಡಿ ರಾಜ್ಯ ರಾಜಾಸ್ತಾನ, ಪಂಜಾಬ್ ಹಾಗೂ ಗುಜರಾತ್ ನಲ್ಲಿ ಉಗ್ರ ದಾಳಿ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಮೂರು ರಾಜ್ಯಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಈ  ಹಿಂದೆ ನದಿ ಮತ್ತು ಕರಾವಳಿ ಮಾರ್ಗವಾಗಿ ಉಗ್ರರು ಭಾರತ ನುಸುಳುವ ಸಾಧ್ಯತೆಗಳು ಯಥೇಚ್ಛವಾಗಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಭದ್ರತಾ ದಳ ದೇಶಾದ್ಯಂತ ಎಲ್ಲ ವಿಮಾನಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಸೂಚನೆ ನೀಡಿದೆ. ಪ್ರಯಾಣಿಕರ ಲಗೇಜುಗಳು ಹಾಗೂ ಬ್ಯಾಗ್ ಗಳನ್ನು  ಸಂಪೂರ್ಣವಾಗಿ ಪರೀಕ್ಷಿಸಿ ಯಾವುದೇ ರೀತಿಯ ಭದ್ರತಾ ಲೋಪವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ವಿಮಾನ ನಿಲ್ದಾಣಗಳಿಗೆ ಅರೆಸೇನಾ ಪಡೆಗಳು, ಬಿಎಸ್ ಎಫ್  ಯೋಧರ ರಕ್ಷಣೆ ಒದಗಿಸುವಂತೆ ಆದೇಶಿಸಿದೆ.

ನಿನ್ನೆಯಷ್ಚೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು, ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡು ಗಡಿಯಲ್ಲಿ ಉಗ್ರ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ್ದರು.  ಅಲ್ಲದೆ ಉಗ್ರ ದಾಳಿ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.