ದೇಶ

13 ವರ್ಷದ ವಿದ್ಯಾರ್ಥಿಯನ್ನು ಹೊಡೆದು ಕೊಂದ ಸಹಪಾಠಿಗಳು

ಹದಿಮೂರು ವರ್ಷದ ವಿದ್ಯಾರ್ಥಿಯನ್ನು ಸಹಪಾಠಿಗಳೇ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಗೌರಾಬಾದಾಶಹಾಪುರದಲ್ಲಿ ನಡೆದಿದೆ....

13 ವರ್ಷದ ವಿದ್ಯಾರ್ಥಿಯನ್ನು ಹೊಡೆದು ಕೊಂದ ಸಹಪಾಠಿಗಳು
ಸಾಂದರ್ಭಿಕ ಚಿತ್ರ
Published On :

ಜೌನ್ಪುರ್ : ಹದಿಮೂರು ವರ್ಷದ ವಿದ್ಯಾರ್ಥಿಯನ್ನು ಸಹಪಾಠಿಗಳೇ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಗೌರಾಬಾದಾಶಹಾಪುರದಲ್ಲಿ ನಡೆದಿದೆ.

ಗ್ರಾಮೋದೆ ಇಂಟರ್ ಕಾಲೇಜ್ ನ 9ನೇ ತರಗತಿ ವಿದ್ಯಾರ್ಥಿ ಅಲ್ತಮಸ್ ನನ್ನು ಆತನ ಸಹಪಾಠಿಗಳೇ ಕಾಲೇಜಿನ ಆವರಣದಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೀಘ್ರವೇ ಕಾಲೇಜು ಆಡಳಿತ ಮಂಡಳಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆತ ಮೃತ ಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.