ಪಾಕ್ ಕಲಾವಿದರ ವಿವಾದ: ಸಲ್ಮಾನ್ ವಿರುದ್ಧ ಸಂಗೀತ್ ಸೋಮ್ ಬೆಂಬಲಿಗರಿಂದ ಪ್ರತಿಭಟನೆ
ಪಾಕಿಸ್ತಾನ ಕಲಾವಿದರ ಪರವಾಗಿ ಮಾತನಾಡಿ ಬೆಂಬಲ ವ್ಯಕ್ತಪಡಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ಬೆಂಬಲಿಗರು...

ಮುಜಾಫರ್ನಗರ: ಪಾಕಿಸ್ತಾನ ಕಲಾವಿದರ ಪರವಾಗಿ ಮಾತನಾಡಿ ಬೆಂಬಲ ವ್ಯಕ್ತಪಡಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ಬೆಂಬಲಿಗರು ಪ್ರತಿಭಟನೆಗಿಳಿದಿದ್ದಾರೆ.
ಸಲ್ಮಾನ್ ಖಾನ್ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿರುವ ಸಂಗೀತ್ ಸೋಮ್ ಅವರ ಬೆಂಬಲಿಗರು ಮುಜಾಫರ್ನಗರದ ಖಾಟೊಲಿ ಟೌನ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಸಲ್ಮಾನ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆ ವೇಳೆ ಪಾಕಿಸ್ತಾನ ಕಲಾವಿದರಿಗೆ ಹೀಗೆಯೇ ಬೆಂಬಲವನ್ನು ನೀಡುತ್ತಿದ್ದರೆ. ಸಲ್ಮಾನ್ ಖಾನ್ ಅವರ ಚಲನಚಿತ್ರಕ್ಕೂ ಭಾರತದಲ್ಲಿ ನಿಷೇಧ ಹೇರಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ.
ಉರಿ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಡುವಂತೆ ಮಾಡಿದ್ದು, ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಕಲಾವಿದರು ಕೂಡಲೇ ಭಾರತವನ್ನು ತೊರೆಯುವಂತೆ (ಎಂಎನ್ ಎಸ್) ಮಹಾರಾಷ್ಟ್ರ ನವನಿರ್ಮಾಣ ಸೇನೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ ಕೂಡ ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಿತ್ತು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ನಟ ಸಲ್ಮಾನ್ ಖಾನ್ ಅವರು, ಪಾಕಿಸ್ತಾನ ಕಲಾವಿದರು ಕೇವಲ ಕಲಾವಿದರಷ್ಟೇ ಅವರೇನು ಭಯೋತ್ಪಾದಕರಲ್ಲ. ಭಯೋತ್ಪಾದನೆ ಹಾಗೂ ಕಲೆ ಎರಡಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


