ಎಷ್ಟೇ ಸಾಕ್ಷ್ಯ ನೀಡಿದರೂ ಪಾಕ್ ಭಯೋತ್ಪಾದನೆ ಉತ್ತೇಜನವನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ: ಬಿಜೆಪಿ
ಪಾಕಿಸ್ತಾನ ಎಷ್ಟೇ ಸಾಕ್ಷ್ಯ ಒದಗಿಸಿದರೂ ಆ ರಾಷ್ಟ್ರ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂಬುದನ್ನು ಮುಚ್ಚಿಡಲು ಸಾಧ್ಯವಿಲ್ಲ...

ನವದೆಹಲಿ: ಕಾಶ್ಮೀರದ ನೌಗಾಮ್ ಸೆಕ್ಟರ್ ನಲ್ಲಿ ಸೇನೆ ಹತ್ಯೆ ಮಾಡಿದ್ದ ಭಯೋತ್ಪಾದಕರಿಂದ ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳು ಪಾಕಿಸ್ತಾನದಿಂದ ತಯಾರಿಸಲ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಪಾಕಿಸ್ತಾನ ಎಷ್ಟೇ ಸಾಕ್ಷ್ಯ ಒದಗಿಸಿದರೂ ಆ ರಾಷ್ಟ್ರ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂಬುದನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದಿದೆ.
ಪಾಕಿಸ್ತಾನದ ಉದ್ದೇಶಗಳನ್ನು ಒಂದೊಂದಾಗಿಯೇ ಭಾರತ ವಿಫಲಗೊಳಿಸುತ್ತಿದೆ. ಎಷ್ಟೇ ಸಾಕ್ಷ್ಯಾಧಾರ ನೀಡಿದರೂ ಪಾಕಿಸ್ತಾನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಹೇಳಿದ್ದಾರೆ.
ಭಾರತದ ವಿರುದ್ಧ ಪಾಕಿಸ್ತಾನ ಪರೋಕ್ಷ ಯುದ್ಧ ನಡೆಸುತ್ತಿದೆ. ಭಯೋತ್ಪಾದಕರಿಂದ ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳು ಪಾಕಿಸ್ತಾನದಿಂದ ತಯಾರಿಸಲ್ಪಟ್ಟಿದ್ದು ಎನ್ನುವುದು ಪಾಕಿಸ್ತಾನದ ಯೋಜನೆಗಳನ್ನು ಭಾರತ ವಿಫಲಗೊಳಿಸುತ್ತಿದೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಭಯೋತ್ಪಾದಕರನ್ನು ಹತ್ಯೆ ಮಾಡಿರುವುದನ್ನು ಖಚಿತಪಡಿಸಿದ್ದ ಭಾರತೀಯ ಸೇನೆ, ಅವರಿಂದ ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳು ಪಾಕಿಸ್ತಾನದಿಂದ ತಯಾರಿಸಲ್ಪಟ್ಟಿದ್ದಾಗಿದ್ದವು ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


