ದೀನ್ ದಯಾಳ್ ಉಪಾಧ್ಯಾಯ ತತ್ವಕ್ಕೆ ಸಂಬಂಧಿಸಿದ 15 ಕೃತಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅ.9 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅರ್ಪಿಸಲಾಗಿರುವ ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.9 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅರ್ಪಿಸಲಾಗಿರುವ ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.
ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳಿಗೆ, ಜೀವನಕ್ಕೆ ಸಂಬಂಧಿಸಿದ 15 ಸಂಪುಟಗಳ ಕೃತಿಗಳನ್ನು ಬಿಡುಗಡೆಯಾಗಿದ್ದು, ಇದರಲ್ಲಿ ಜನಸಂಘದ ಬೆಳವಣಿಗೆ, 1965 ರಲ್ಲಿ ನಡೆದ ಭಾರತ- ಪಾಕಿಸ್ತಾನ ಯುದ್ಧ ತಾಷ್ಕೆಂಟ್ ಒಪ್ಪಂದ, ಗೋವಾ ವಿಮೋಚನೆ ಸೇರಿದಂತೆ ದೇಶಕ್ಕೆ ಸಂಬಂಧಿಸಿದ ಪ್ರಮುಖ ಘಟನಾವಳಿಗಳ ಬಗ್ಗೆ ಮಾಹಿತಿ ನೀಡಲಾಗಿದೆ. 1967 ರಲ್ಲಿ ಜನಸಂಘದ ಅಧ್ಯಕ್ಷರಾದ ಬೆನ್ನಲ್ಲೇ ದೀನ್ ದಯಾಳ್ ಉಪಾಧ್ಯಾಯ ಅವರ ಹತ್ಯೆಯನ್ನು ಸಹ ಅ.9 ರಂದು ಬಿಡುಗಡೆಯಾಗಿರುವ ಕೃತಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಭಾತ್ ಪಬ್ಲಿಕೇಷನ್ಸ್ ಹಾಗೂ ಅಖಂಡ ಮಾನವತಾವಾದಕ್ಕಾಗಿರುವ ಸಂಶೋಧನೆ ಹಾಗೂ ಅಭಿವೃದ್ಧಿ ಸಂಘಟನೆ ಸಹಭಾಗಿತ್ವದಲ್ಲಿ 15 ಕೃತಿಗಳು ಪ್ರಕಟವಾಗಿದ್ದು, ಇದರಲ್ಲಿ ಭಾರತೀಯ ನೆಲೆಗಟ್ಟಿನಲ್ಲಿ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದೀನ್ ದಯಾಳ್ ಉಪಾಧ್ಯಾಯ ಅವರು ಪ್ರತಿಪಾದನೆಯ ಬಗ್ಗೆಯೂ ವಿಮರ್ಶೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


