ಅಜ್ಜಿಯ ಜನ್ಮ ದಿನಾಚರಣೆಯಂದು ಮೊಮ್ಮಗಳಿಂದ ಚುನಾವಣಾ ಪ್ರಚಾರ ಆರಂಭ
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಗರಿಗೆದರಿದ್ದು...

Published On :
ಲಕ್ನೋ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಗರಿಗೆದರಿದ್ದು ಕಾಂಗ್ರೆಸ್ ನಲ್ಲಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆಯಾದ ನವೆಂಬರ್ 19ರಂದು ಅವರ ಮೊಮ್ಮಗಳು ಪ್ರಿಯಾಂಕಾ ಗಾಂಧಿ ಪ್ರಚಾರ ಕಾರ್ಯಕ್ಕೆ ಧುಮುಕಲಿದ್ದಾರೆ. ಅಲಹಾಬಾದಿನಲ್ಲಿ ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಅಧಿಕಾರದ ವಿಷಯ ಬಂದಾಗ ಗಾಂಧಿ ಕುಟುಂಬ ಅದನ್ನು ಮನೆಯಲ್ಲಿಯೇ ಇಟ್ಟುಕೊಳ್ಳುತ್ತದೆ.
ಪ್ರಿಯಾಂಕಾ ಸಹೋದರ ರಾಹುಲ್ ಗಾಂಧಿಯವರ ತಿಂಗಳ ಕಾಲದ ಕಿಸಾನ್ ಯಾತ್ರೆ ಕಳೆದ ವಾರ ನೀರಸ ಪ್ರತಿಕ್ರಿಯೆಯೊಂದಿಗೆ ದೆಹಲಿಯಲ್ಲಿ ಅಂತ್ಯಗೊಂಡಿತ್ತು. 141 ವಿಧಾನಸಭಾ ಕ್ಷೇತ್ರಗಳಲ್ಲಿ 26 ರೋಡ್ ಶೋ, 700 ಸಭೆಗಳನ್ನು ನಡೆಸಿದ ರಾಹುಲ್ ಗಾಂಧಿ ಯಾತ್ರೆಗೆ ಹೇಳಿಕೊಳ್ಳುವಂತಹ ಪ್ರಚಾರ, ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಎಲ್ಲಾ ಬೆಳವಣಿಗೆ ಸೋದರಿ ಪ್ರಿಯಾಂಕಾ ಗಾಂಧಿಯವರ ಅಗತ್ಯತೆ ಪಕ್ಷದಲ್ಲಿ ತೋರಿಸುತ್ತದೆ. 2012ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಾಯಿ ಮತ್ತು ಸಹೋದರರ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಚುನಾವಣಾ ಪ್ರಚಾರ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


