ದೇಶ

ಜಯಲಲಿತಾ ಸಹಿ ಪೋರ್ಜರಿಯಾಗೋ ಸಾಧ್ಯತೆ: ರಾಜ್ಯಪಾಲರಿಗೆ ಉಚ್ಚಾಟಿತ ಎಐಎಡಿಎಂಕೆ ಎಂಪಿ ಪತ್ರ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಸಹಿಯನ್ನು ಫೋರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ಉಚ್ಚಾಟಿತ...

ಜಯಲಲಿತಾ ಸಹಿ ಪೋರ್ಜರಿಯಾಗೋ ಸಾಧ್ಯತೆ: ರಾಜ್ಯಪಾಲರಿಗೆ ಉಚ್ಚಾಟಿತ ಎಐಎಡಿಎಂಕೆ ಎಂಪಿ ಪತ್ರ
ಶಸಿಕಲಾ ಪುಷ್ಪ ಅವರು ಬರೆದಿರುವ ಪತ್ರ
Published On :

ಚೆನ್ನೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಸಹಿಯನ್ನು ಫೋರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ಉಚ್ಚಾಟಿತ ರಾಜ್ಯಸಭೆ ಸದಸ್ಯೆ ಶಸಿಕಲಾ ಪುಷ್ಪಾ ರಾಜ್ಯ.ಪಾಲರಿಗೆ ಪತ್ರ ಬರೆದಿದ್ದಾರೆ.

ಜಯ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಪಕ್ಷದ ವರಿಷ್ಠರ ಸಹಿಯನ್ನು ನಕಲಿ ಮಾಡು ಸಾಧ್ಯತೆಯಿದೆ ಎಂದು ಗವರ್ನರ್ ಸಿ. ವಿದ್ಯಾಸಾಗರ್ ಅವರಿಗೆ ಪತ್ರ ಬರೆದಿದ್ದಾರೆ.

ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ಪ್ರಧಾನ ಉಪ ಕಾರ್ಯದರ್ಶಿ ರಾಜ್ಯದ ಆಡಳಿತ ಚುಕ್ಕಾಣಿಯನ್ನು ಮುಂದುವರಿಸುವಂತೆ ನಾಮ ನಿರ್ದೇಶನ ಮಾಡಲು ಮುಖ್ಯಮಂತ್ರಿ ಸುತ್ತ ಇರುವ ಕೆಲವು ವ್ಯಕ್ತಿಗಳು ಸಿಎಂ ಅವರ ಸಹಿಯನ್ನು ನಕಲು ಮಾಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಹೀಗಾಗಿ ಜಯಲಲಿತಾ ಆಸ್ಪತ್ರೆಗೆ ದಾಖಲಾದ ದಿನದಿಂದ ಇಲ್ಲಿಯವರೆಗೆ ಮಾಡಿರುವ ಸಹಿಗಳನ್ನು ಪರಿಶೀಲಿಸಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಎಐಎಡಿಎಂಕೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಶಸಿಕಲಾ ಪುಷ್ಪ ಅವರನ್ನು ಆಗಸ್ಟ್ ನಲ್ಲಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.