ದೇಶ

ಶೋಪಿಯಾನ್ ನಲ್ಲೂ ಉಗ್ರರ ಅಟ್ಟಹಾಸ; ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ, ಓರ್ವ ಸೈನಿಕ ಸೇರಿ 9 ಮಂದಿಗೆ ಗಾಯ

ಅತ್ತ ಪ್ಯಾಂಪೋರ್ ಹೊರವಲಯದ ಸರ್ಕಾರಿ ಕಚೇರಿಯ ಮೇಲೆ ಉಗ್ರರ ದಾಳಿ ಮುಂದುವರೆದಿರುವಂತೆಯೇ ಇತ್ತ ಶೋಪಿಯಾನ್ ನಲ್ಲೂ ಉಗ್ರರು ಅಟ್ಟಹಾಸ ಮೆರೆದಿದ್ದು, ಸೇನಾ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದು, ದಾಳಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶೋಪಿಯಾನ್ ನಲ್ಲೂ ಉಗ್ರರ ಅಟ್ಟಹಾಸ; ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ, ಓರ್ವ ಸೈನಿಕ ಸೇರಿ 9 ಮಂದಿಗೆ ಗಾಯ
ಶೋಪಿಯಾನ್ ಮಾರುಕಟ್ಟೆ (ಸಂಗ್ರಹ ಚಿತ್ರ)
Published On :

ಶ್ರೀನಗರ: ಅತ್ತ ಪ್ಯಾಂಪೋರ್ ಹೊರವಲಯದ ಸರ್ಕಾರಿ ಕಚೇರಿಯ ಮೇಲೆ ಉಗ್ರರ ದಾಳಿ ಮುಂದುವರೆದಿರುವಂತೆಯೇ ಇತ್ತ ಶೋಪಿಯಾನ್ ನಲ್ಲೂ ಉಗ್ರರು ಅಟ್ಟಹಾಸ ಮೆರೆದಿದ್ದು, ಸೇನಾ  ವಾಹನಗಳ ಮೇಲೆ ಗ್ರೆನೇಡ್  ಎಸೆದಿದ್ದು, ದಾಳಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಲಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಸೇರಿದಂತೆ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ.  ಶೋಪಿಯಾನ್ ನ ಮಾರುಕಟ್ಟೆಯಲ್ಲಿ ನಿಯೋಜಿಸಲಾಗಿದ್ದ ಸಿಆರ್ ಪಿಎಫ್ ಯೋಧರ ಮೇಲೆ ಈ ದಾಳಿ ನಡೆದಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಯಲ್ಲಿ ಹೆಚ್ಚು ನಾಗರಿಕರು ಸೇರಿದ್ದರ  ಪರಿಣಾಮ 8 ಮಂದಿ ನಾಗರಿಕರೂ ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ದಾಳಿ ಬೆನ್ನಲ್ಲೇ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಪ್ರಸ್ತುತ ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಂಡು ಉಗ್ರರ ವಿರುದ್ಧ ಪ್ರತಿದಾಳಿ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.