ರಾಹುಲ್ ಗಾಂಧಿ ದಲ್ಲಾಳಿ ಹೇಳಿಕೆ ವಿರುದ್ಧ ಮನೋಹರ್ ಪರಿಕ್ಕರ್ ವಾಗ್ದಾಳಿ
ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂನ್ ಕಿ ದಲಾಲಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ...

ಗೋವಾ: ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂನ್ ಕಿ ದಲಾಲಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ಯನ್ನು ತಳ್ಳಿ ಹಾಕಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ಸಬ್ ಮರೀನ್ ಮತ್ತು ಹೆಲಿಕಾಪ್ಟರ್ ಖರೀದಿಸುವ ವೇಳೆ ದಲ್ಲಾಳಿಗಳಿದ್ದರು ಎದು ಪರಿಕ್ಕರ್ ತಿರುಗೇಟು ನೀಡಿದ್ದಾರೆ.
ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿ ಇಲಾಖೆಯ ಒಳಗೆ ನೋಡಿದಾಗ ನನಗೆ ಸತ್ಯದ ಅರಿವಾಯಿತು. ಸಬ್ ಮರೀನ್ ಡೀಲ್ ಮತ್ತು ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ದಲ್ಲಾಳಿಗಳು ಇದ್ದುದು ತಿಳಿಯಿತು ಎಂದು ಅವರು ಹೇಳಿದ್ದಾರೆ. ಇದನ್ನೆಲ್ಲಾ ನೋಡಿದ ಮೇಲೆ ನನಗೆ ದಲ್ಲಾಳಿ ಪದದ ಅರ್ಥ ಗೊತ್ತಾಗಿದ್ದು ಎಂದು ಟೀಕಿಸಿದ್ದಾರೆ.
ಸರ್ಜಿಕಲ್ ದಾಳಿಯ ನಂತರ ಬಿಜೆಪಿಯನ್ನು ಎಲ್ಲರೂ ನಿಂದಿಸಿದರು, ದಾಳಿಯ ಲಾಭ ಪಡೆಯಲು ನಾವು ಯತ್ನಿಸುತ್ತಿದ್ದೇವೆ ಎಂದು ಆರೋಪಿಸಿದರು. ಭಾರತೀಯ ಯೋಧರ ತ್ಯಾಗ, ಬಲಿದಾನ ಮಾಡಿ ಯಾವುದೇ ರಾಜಕೀಯ ಲಾಭ ಪಡೆಯುವ ಆಸೆ ನಮಗಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


