'ಮೊಹರಂ ಆಚರಣೆ': ಶ್ರೀನಗರದ ಹಲವೆಡೆ ನಿಷೇಧಾಜ್ಞೆ ಜಾರಿ
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮೊಹರಂ ಮೆರವಣಿಗೆಗೆ ತಡೆಯೊಡ್ಡಿ ಶ್ರೀನಗರದ ಹಲವೆಡೆ...

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮೊಹರಂ ಮೆರವಣಿಗೆಗೆ ತಡೆಯೊಡ್ಡಿ ಶ್ರೀನಗರದ ಹಲವೆಡೆ ಬುಧವಾರ ನಿಷೇಧಾಜ್ಞೆಯನ್ನು ಜಾರಿ ಮಾಡಿದ್ದಾರೆ.
ಮತ್ತೆ ಹಿಂಸಾಚಾರ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೊಹರಂ ಮೆರವಣಿಗೆಗೂ ತಡೆಯೊಡ್ಡಲಾಗಿದೆ. ಶ್ರೀನಗರದ ಸೇರಿದಂತೆ ಹಲವೆಡೆ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
21 ವರ್ಷದ ಬುರ್ಹಾನ್ ಮುಜಾಫರ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಯೋಧರು ಹತ್ಯೆ ಮಾಡಿದ್ದರು. ಇದರಂತೆ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಜುಲೈ.9 ರಿಂದಲೂ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಈ ವರೆಗೂ 91 ಮಂದಿ ಸಾವನ್ನಪ್ಪಿದ್ದು, 12,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


