ಜಯಾ, ನೀವು ನಿರ್ಭೀತ ಸಿಂಹಿಣಿ; ನಿಮ್ಮ ವಿರೋಧಿಗಳು ಕಪಿಗಳು: ಕಾಟ್ಜು
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಮಾಧ್ಯಮಗಳಿಗೆ ಆಹಾರವಾಗುತ್ತಿರುವ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ...

ನವದೆಹಲಿ: ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಮಾಧ್ಯಮಗಳಿಗೆ ಆಹಾರವಾಗುತ್ತಿರುವ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ತಮಿಳುನಾಡು ಸಿಎಂ ಅವರನ್ನು ಹಾಡಿ ಹೊಗಳಿದ್ದಾರೆ.
ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಕಾಟ್ಜು ಜಯಲಲಿತಾ ಅವರನ್ನು ಅಂಜಿಕೆಯಿಲ್ಲದ ಸಿಂಹಿಣಿ, ಅವರ ವಿರೋಧಿಗಳು ಕಪಿಗಳು ಎಂಬ ಹೋಲಿಕೆ ಮಾಡಿದ್ದಾರೆ. ಜೊತೆಗೆ ಜಯಲಲಿತಾ ಅವರ ಧೈರ್ಯ, ಸ್ಥೈರ್ಯ ನೋಡಿ ನನಗೆ ಅವರ ಮೇಲೆ ಪ್ರೀತಿ ಉಂಟಾಗಿತ್ತು ಎಂದು ಹೇಳಿಕೊಂಡಿದ್ದಾರೆ.
ನಾನು ಯುವಕನಾಗಿದ್ದಾಗ ನನಗೆ ಜಯಲಲಿತಾ ಮೇಲೆ ಪ್ರೇಮಾಂಕುರವಾಗಿತ್ತು. ಅವರ ಸೌಂದರ್ಯಕ್ಕೆ ನನ್ನ ಮನಸ್ಸು ಸೋತು ಪ್ರೀತಿ ಬಲೆಗೆ ಬಿದ್ದಿದೆ ಎಂಬುದನ್ನು ಫೇಸ್‍ಬುಕ್‍ನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಜಯಾ ಗೊತ್ತೇ ಇಲ್ಲ. ತೀವ್ರ ಕಾಯಿಲೆಯಿಂದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಬೇಗ ಗುಣಮುಖರಾಗಲಿ ಎಂದು ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


