ಗೋವಾದಲ್ಲಿ ಬ್ರಿಕ್ಸ್ ಶೃಂಗಸಭೆ; ಪ್ರಬಲ ರಾಜತಾಂತ್ರಿಕ ಬೆಂಬಲದತ್ತ ಮೋದಿ ಚಿತ್ತ!
ವಿಶ್ವದ ಅಭಿವೃದ್ಧಿಶೀಲ ಐದು ರಾಷ್ಟ್ರಗಳ ಸಂಘಟನೆ ಬ್ರಿಕ್ಸ್ನ ಶೃಂಗಸಭೆಗೆ ಗೋವಾದಲ್ಲಿ ಶನಿವಾರ ಚಾಲನೆ ದೊರೆಯಲಿದ್ದು, ಭಯೋತ್ಪಾದನೆ ಹಾಗೂ ಆರ್ಥಿಕ ವಿಚಾರ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ.

ಪಣಜಿ: ವಿಶ್ವದ ಅಭಿವೃದ್ಧಿಶೀಲ ಐದು ರಾಷ್ಟ್ರಗಳ ಸಂಘಟನೆ ಬ್ರಿಕ್ಸ್ನ ಶೃಂಗಸಭೆಗೆ ಗೋವಾದಲ್ಲಿ ಶನಿವಾರ ಚಾಲನೆ ದೊರೆಯಲಿದ್ದು, ಭಯೋತ್ಪಾದನೆ ಹಾಗೂ ಆರ್ಥಿಕ ವಿಚಾರ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ.
ಭಾರತದ ಮಟ್ಟಿಗೆ ಗೋವಾ ಬ್ರಿಕ್ಸ್ ಶೃಂಗಸಭೆ ಪ್ರಮುಖವಾಗಿದ್ದು, ಗಡಿಯಾಚೆಗಿನ ಭಯೋತ್ಪಾದನೆ ಹಾಗೂ ವಾಣಿಜ್ಯಾಭಿವೃದ್ಧಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಇತರೆ ಸದಸ್ಯ ರಾಷ್ಟ್ಟಗಳಿಂದ ಪ್ರಬಲ ರಾಜತಾಂತ್ರಿಕ ಬೆಂಬಲ ಪಡೆಯುವತ್ತ ಗಮನ ಕೇಂದ್ರೀಕರಿಸಿದೆ. ಇನ್ನು ನಾಳೆಯಿಂದ ಆರಂಭಗೊಳ್ಳಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಸದಸ್ಯ ರಾಷ್ಟ್ರಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದು, ಸದಸ್ಯ ರಾಷ್ಟ್ರಗಳ ನಡುವೆ ಹಲವಾರು ಒಪ್ಪಂದಗಳು ಅಂತಿಮಗೊಳ್ಳಲಿವೆ.
ಈಗಾಗಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಲು ನಿರ್ಧರಿಸಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಭಾರತ ಎನ್ಎಸ್ಜಿ ಸೇರ್ಪಡೆಯಾಗಲು ಚೀನಾ ವಿರೋಧ ವ್ಯಕ್ತಪಡಿಸಿರುವುದು, ಉಗ್ರ ಮಸೂದ್ ಅಜರ್ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ಸತತ ಎರಡನೇ ಬಾರಿ ವಿರೋಧಿಸಿರುವ ವಿಚಾರ ಮಾತುಕತೆ ವೇಳೆ ಪ್ರಸ್ತಾಪವಾಗುವ ಸಾಧ್ಯತೆ ಇದೆ.
ಶೃಂಗಸಭೆ ವೇಳೆ ಪ್ರಧಾನಿ ಮೋದಿ ವಿವಿಧ ದೇಶಗಳ 10ಕ್ಕೂ ಹೆಚ್ಚು ನಾಯಕರೊಂದಿಗೆ ಮಾತುಕತೆ ನಡೆಲಿದ್ದು, ಬ್ರಿಕ್ಸ್ ರಾಷ್ಟ್ರಗಳ ಹೊರತಾಗಿ ಭೂತಾನ್, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಥಾಯ್ಲೆಂಡ್ನ ಆಡಳಿತ ಮುಖ್ಯಸ್ಥರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ.
ಅಕ್ಟೋಬರ್ 16ರಂದು ಮ್ಯಾನ್ಮಾರ್ ಕೌನ್ಸೆಲರ್ ಆಂಗ್ ಸಾನ್ ಸೂಕಿ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಆಂಗ್ ಸಾನ್ ಸೂಕಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


