ದೇಶ

ಸ್ವಜನ ಪಕ್ಷಪಾತ ಆರೋಪ: ಕೇರಳ ಕೈಗಾರಿಕಾ ಸಚಿವ ಜಯರಾಜನ್ ರಾಜಿನಾಮೆ

ತಮ್ಮ ವಿರುದ್ಧ ಸ್ವಜನ ಪಕ್ಷಪಾತ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಕೈಗಾರಿಕಾ ಸಚಿವ ಇ.ಪಿ. ಜಯರಾಜನ್...

ಸ್ವಜನ ಪಕ್ಷಪಾತ ಆರೋಪ: ಕೇರಳ ಕೈಗಾರಿಕಾ ಸಚಿವ ಜಯರಾಜನ್ ರಾಜಿನಾಮೆ
ಇ ಪಿ ಜಯರಾಜನ್
Published On :
ತಿರುವನಂತಪುರಂ: ತಮ್ಮ ವಿರುದ್ಧ ಸ್ವಜನ ಪಕ್ಷಪಾತ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಕೈಗಾರಿಕಾ ಸಚಿವ ಇ.ಪಿ. ಜಯರಾಜನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.
ಜಯರಾಜನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತಮ್ಮ ಸಂಬಂಧಿಕರನ್ನು ನೇಮಕ ಮಾಡಿದ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಕೇರಳ ಜಾಗೃತ ದಳ ಹಾಗೂ ಭ್ರಷ್ಟಾಚಾರ ನಿಗ್ರಹ ದಳ ಸಚಿವ ವಿರುದ್ಧ ತನಿಖೆ ನಡೆಸುತ್ತಿದೆ.
ಇ.ಪಿ.ಜಯರಾಜನ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಸಿಪಿಎಂ ರಾಜ್ಯ ಕಾರ್ಯದರ್ಶಿಗಳ ಸಭೆ ಕರೆಯಲಾಗಿತ್ತು. ಈ ವೇಳೆ ಜಯರಾಜನ್ ಅವರು ತಮ್ಮ ಸಂಬಂಧಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ತಪ್ಪು ಮಾಡಿದೆ ಎಂದು ಕೊಂಡಿದ್ದಾರೆ. ಅಲ್ಲದೆ ಈ ಸಂಬಂಧ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಅನುಮತಿ ಕೊಡಿ ಎಂದು ಜಯರಾಜನ್ ಅವರು ಕೇಳಿಕೊಂಡಿರುವುದಾಗಿ ಸಭೆಯ ನಂತರ ಸಿಪಿಎಂ ಕಾರ್ಯದರ್ಶಿ ಕೊಡಿಯೆರಿ ಬಾಲಕೃಷ್ಣನ್ ಅವರು ತಿಳಿಸಿದ್ದಾರೆ.
ಜಯರಾಜನ್ ಅವರ ರಾಜಿನಾಮೆ ಸಿಪಿಎಂ ಇತರೆ ಪಕ್ಷಗಳಂತೆ ಅಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಬಾಲಕೃಷ್ಣನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.