ಶಿವಸೇನಾ ಕಾರ್ಯಕರ್ತರು ನನ್ನ ಹತ್ಯೆ ಮಾಡಲು ಯತ್ನಿಸಿದ್ದರು: ಬಿಜೆಪಿ ಸಂಸದ
ಶಿವಸೇನಾ ಕಾರ್ಯಕರ್ತರ ಗುಂಪೊಂದು ನನ್ನನ್ನು ಹತ್ಯೆ ಮಾಡಲು ಯತ್ನಿಸಿತು ಎಂದು ಬಿಜೆಪಿ ಸಂಸದ ಕಿರೀಟ್ ಸೋಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ...

ಮುಂಬೈ: ಶಿವಸೇನಾ ಕಾರ್ಯಕರ್ತರ ಗುಂಪೊಂದು ನನ್ನನ್ನು ಹತ್ಯೆ ಮಾಡಲು ಯತ್ನಿಸಿತು ಎಂದು ಬಿಜೆಪಿ ಸಂಸದ ಕಿರೀಟ್ ಸೋಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ.
ಈ ಕುರಿತಂತೆ ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಸುಬುರ್ಬನ್ ಮುಲುಂಡ್ ನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ (ಎಸಿಜಿಎಂ) ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿನ ಭ್ರಷ್ಟ್ರಾಚಾರ ಮಾಫಿಯಾದ ಪ್ರತಿಕೃತಿ ದಹನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಶಿವಸೇನಾ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.
ಕಾರ್ಯಕ್ರಮ ಮುಕ್ತಾಯಗೊಳ್ಳುತ್ತಿದ್ದಂತೆಯೇ ಸ್ಥಳದಿಂದ ಜನರು ಹೋದರು. ಆದರೆ, ಶಿವಸೇನಾ ಕಾರ್ಯಕ್ರತರು ಮಾತ್ರ ಸ್ಥಳದಲ್ಲಿದ್ದ ಬಸ್ ನಲ್ಲಿಯೇ ಕುಳಿತಿದ್ದರು. ನಂತರ ಸ್ಥಳದಲ್ಲಿ ಹಲವರ ಮೇಲೆ ಹಲ್ಲೆ ನಡೆಸಿದರು, ಸ್ಥಳದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ನಂತರ ನನ್ನ ಮೇಲೂ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದರು ಎಂದು ಸೋಮಯ್ಯ ಅವರು ಹೇಳಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು, 5 ಮಂದಿಯನ್ನು ಬಂಧನಕ್ಕೊಳಪಡಿಸಿತ್ತು. ಇದೀಗ ಮತ್ತೆ 8 ಮಂದಿಯನ್ನು ಬಂಧನಕ್ಕೊಳಪಡಿಸಿದೆ. ಇದರಂತೆ ಪ್ರಕರಣ ಸಂಬಂಧ 13 ಮಂದಿ ಬಂಧನಕ್ಕೊಳಗಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಿವಸೇನಾ ವಕ್ತಾರೆ ನೀಲಂ ಗೋರ್ಹೆ ಅವರು, ಆರೋಪಗಳು ನಿಜಕ್ಕೂ ನಗುಬರಿಸುವಂತಿದೆ. ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು ಸೋಮಯ್ಯ ಅವರಿಗೆ ಹವ್ಯಾಸವಾಗಿ ಹೋಗಿದೆ. ಈ ರೀತಿಯ ಆರೋಪಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


