ಸಮಾನ ನಾಗರೀಕ ಸಂಹಿತೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ: ಅಬು ಅಜ್ಮಿ
ಸಮಾನ ನಾಗರೀಕ ಸಂಹಿತೆ ಕುರಿತಂತೆ ಸುಪ್ರೀಂಕೋರ್ಟ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ ಅವರು ವಿರೋಧ ವ್ಯಕ್ತಪಡಿಸಿದ್ದು, ಸಮಾನ ನಾಗರೀಕ...

ಮುಂಬೈ: ಸಮಾನ ನಾಗರೀಕ ಸಂಹಿತೆ ಕುರಿತಂತೆ ಸುಪ್ರೀಂಕೋರ್ಟ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ ಅವರು ವಿರೋಧ ವ್ಯಕ್ತಪಡಿಸಿದ್ದು, ಸಮಾನ ನಾಗರೀಕ ಸಂಹಿತೆಯನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ತ್ರಿವಳಿ ತಲಾಕ್, ನಿಕಾಹ್ ಹಲಾಲ್, ಬಹುಪತ್ನಿತ್ವ ಇಸ್ಲಾಮ್ ನ ಆಚರಣೆಯ ಅವಿಭಾಜ್ಯ ಅಂಗಗಳಲ್ಲ ಅಥವಾ ಅದನ್ನು ಪಾಲಿಸಲೇಬೇಕಾದ ಅನಿವಾರ್ಯ ಕಾನೂನುಗಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರತೀಯೊಬ್ಬರಿಗೂ ಧರ್ಮದ ಸ್ವಾತಂತ್ರ್ಯದ ಹಕ್ಕಿದೆ. ಹೀಗಾಗಿ ನಾವು ಎಂದಿಗೂ ಸಮಾನ ನಾಗರೀಕ ಸಂಹಿತೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ನಮ್ಮ ಧರ್ಮದ ನೀತಿ ಹಾಗೂ ನಿಯಮಗಳನ್ನು ಬದಲಿಸಿ ಸರ್ಕಾರ ತನ್ನದೇ ರೀತಿಯಲ್ಲಿ ಕಾನೂನನ್ನು ಅಳವಡಿಸಿದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಧರ್ಮದ ನೀತಿಗಳನ್ನು ಸರ್ಕಾರ ಬದಲಿಸಿದ್ದೇ ಆದರೆ, ದೇಶದಲ್ಲಿರುವ ಯಾವುದೇ ಪ್ರಜೆ ಕೂಡ ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


