ವಿಷಪ್ರಾಷನ, ವಿದ್ಯುದಾಘಾತದಿಂದ 13 ಹುಲಿಗಳ ಸಾವು
ವಿಷಪ್ರಾಶನ ಮತ್ತು ವಿದ್ಯುತ್ ಆಘಾತಗಳಿಂದಾಗಿ ಮಧ್ಯ ಪ್ರದೇಶದ ಭೂಪಾಲ್ ನ ಎರಡು ರಾಷ್ಟ್ರೀಯ ಉದ್ಯಾನಗಳಲ್ಲಿ ಕಳೆದ 1 ವರ್ಷದಲ್ಲಿ ಸುಮಾರು 13 ಹುಲಿಗಳು...

ಭೂಪಾಲ್: ವಿಷಪ್ರಾಶನ ಮತ್ತು ವಿದ್ಯುತ್ ಆಘಾತಗಳಿಂದಾಗಿ ಮಧ್ಯ ಪ್ರದೇಶದ ಭೂಪಾಲ್ ನ ಎರಡು ರಾಷ್ಟ್ರೀಯ ಉದ್ಯಾನಗಳಲ್ಲಿ ಕಳೆದ 1 ವರ್ಷದಲ್ಲಿ ಸುಮಾರು 13 ಹುಲಿಗಳು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ.
ಮಾಹಿತಿ ಹಕ್ಕು ಕಾಯ್ದೆ ಅನ್ವಯ ಪೆಂಚ್ ರಾಷ್ಟ್ರೀಯ ವನ್ಯಧಾಮನಗಳಲ್ಲಿ 9 ಹುಲಿಗಳು ಹಾಗೂ ಬಂದಾವರ್ಗ್ ರಾಷ್ಟ್ರೀಯ ಉದ್ಯಾನವನದಲ್ಲಿ 4 ಹುಲಿಗಳು ಸಾವನ್ನಪ್ಪಿವೆ ಎಂದು ಮಧ್ಯಪ್ರದೇಶ ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಮಧ್ಯ ಪ್ರದೇಶದ ವನ್ಯಧಾಮಗಳಲ್ಲಿ ಹುಲಿಗಳ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ವನ್ಯಜೀವಿ ಕಾರ್ಯಕರ್ತ ಅಜಯ್ ದುಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ ಒಂದು ವರ್ಷದಲ್ಲಿ ವನ್ಯಧಾಮಗಳಲ್ಲಿ ಸಾವನ್ನಪ್ಪಿರುವ ಹುಲಿಗಳ ಮಾಹಿತಿ ಹಾಗೂ ಹೇಗೆ ಸತ್ತವು ಎಂಬುದರ ಬಗ್ಗೆ ಮಾಹಿತಿ ನೀಡಬೇಕೆಂದು ಕೋರಿದ್ದರು.
ಅದರಂತೆ ಮಾಹಿತಿ ನೀಡಿರುವ ಮಧ್ಯಪ್ರದೇಶ ಅರಣ್ಯ ಇಲಾಖೆ, ವಿಷ, ವಿದ್ಯುತ್ ಸಾಕ್, ಹಾಗೂಬ ರೋಗಗಳಿಂದ ಸಾವನ್ನಪ್ಪಿವೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


