ದೇಶ

'ಭಯೋತ್ಪಾದನೆಯ ಮಾತೃಭೂಮಿ ಪಾಕಿಸ್ತಾನ': ಪ್ರಧಾನಿ ಮೋದಿ

ಪಾಕಿಸ್ತಾನ ಭಯೋತ್ಪಾದನೆಯ ಮಾತೃಭೂಮಿಯಾಗಿದ್ದು, ಬ್ರಿಕ್ಸ್ ರಾಷ್ಟ್ರಗಳು ಒಂದುಗೂಡಿ ಭಯೋತ್ಪಾದನೆ ವಿರುದ್ಧ ಹೋರಾಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

'ಭಯೋತ್ಪಾದನೆಯ ಮಾತೃಭೂಮಿ ಪಾಕಿಸ್ತಾನ': ಪ್ರಧಾನಿ ಮೋದಿ
ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಪ್ರಿಕಾ ದೇಶಗಳ ನಾಯಕರೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡುತ
Published On :

ನವದೆಹಲಿ: ಪಾಕಿಸ್ತಾನ ದೇಶ ಭಯೋತ್ಪಾದನೆಯ ಮಾತೃಭೂಮಿಯಾಗಿದ್ದು, ಬ್ರಿಕ್ಸ್ ರಾಷ್ಟ್ರಗಳು ಒಂದುಗೂಡಿ ಭಯೋತ್ಪಾದನೆ ವಿರುದ್ಧ ಹೋರಾಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಗೋವಾದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದ್ದು, ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಪ್ರಿಕಾ ದೇಶಗಳ ನಾಯಕರೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಪ್ರಧಾನಿ ಮೋದಿಯವರು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ.

ಪಾಕಿಸ್ತಾನ ದೇಶ ಭಯೋತ್ಪಾದನೆಯ ಮಾತೃಭೂಮಿಯಾಗಿದ್ದು, ಭಯೋತ್ಪಾದನೆ ವಿರುದ್ಧ ಬ್ರಿಕ್ಸ್ ರಾಷ್ಟ್ರಗಳು ಒಂದುಗೂಡಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ದೇಶವನ್ನು ಶಿಕ್ಷಿಸಬೇಕಿದೆ ಎಂದಿದ್ದಾರೆ.

ಪಾಕಿಸ್ತಾನ ಕೇವಲ ಭಯೋತ್ಪಾದನೆಗೆ ಆಶ್ರಯವನ್ನಷ್ಟೇ ನೀಡುತ್ತಿಲ್ಲ, ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿದೆ. ಇಂತರ ಬೆಳವಣಿಗೆಗಳು ನಮ್ಮ ಆರ್ಥಿಕ ಬೆಳವಣಿಗೆಗಳಿಗೆ ಅಪಾಯಗಳನ್ನು ತಂದೊಡ್ಡಲಿದೆ. ಭಯೋತ್ಪಾದನೆಯನ್ನು ಪ್ರಚೋದಿಸುತ್ತಿರುವ ದೇಶ ನಮ್ಮ ನೆರೆರಾಷ್ಟ್ರವಾಗಿರುವ ನಮ್ಮ ದುರ್ದೈವವಾಗಿದೆ ಎಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿಯವರು ಹೇಳಿದ್ದಾರೆ.

ಇಂತರ ಮನಸ್ಥಿತಿಯುಳ್ಳವರನ್ನು ನಾವು ಖಂಡಿಸಬೇಕಿದೆ. ಭಯೋತ್ಪಾದನೆ ವಿರುದ್ಧ ಹೋರಾಡಲು ಬ್ರಿಕ್ಸ್ ರಾಷ್ಟ್ರಗಳು ಒಂದುಗೂಡಿ ಎದ್ದು ನಿಲ್ಲಿಸಬೇಕಿದೆ. ಬೆದರಿಕೆಗಳ ವಿರುದ್ಧ ನಮ್ಮ ಧ್ವನಿ ಏರಬೇಕಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.