ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ: ಮನೋಹರ್ ಪರಿಕ್ಕರ್
ಕದನ ವಿರಾಮ ಉಲ್ಲಂಘನೆ ಮಾಡುವವರಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸೋಮವಾರ...

ನವದೆಹಲಿ: ಕದನ ವಿರಾಮ ಉಲ್ಲಂಘನೆ ಮಾಡುವವರಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸೋಮವಾರ ಹೇಳಿದ್ದಾರೆ.
ಸಂಖ್ಯೆಗಳನ್ನು ನೋಡಲು ಆರಂಭಿಸಿದರೆ, ಕಳೆದ 5-6 ವರ್ಷಗಳಿಂದಲೂ ಪಾಕಿಸ್ತಾನ ನೂರಾರು ಕದನ ವಿರಾಮ ಉಲ್ಲಂಘನೆಯನ್ನು ಮಾಡಿದೆ. ಈಗಲೂ ಮಾಡುತ್ತಿದೆ. ಆದರೆ, ಈ ಹಿಂದೆ ಮಾಡಿದ್ದಕ್ಕಿಂತಲೂ ಈಗ ಕದನ ವಿರಾಮ ಉಲ್ಲಂಘನೆ ಮಾಡಿದರೆ ನಾವು ದಿಟ್ಟ ಉತ್ತರವನ್ನು ನೀಡಲಿದ್ದೇವೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಸೇನೆ ಭಾನುವಾರದಿಂದ ಈ ವರೆಗೂ ಎರಡು ಬಾರಿ ಕದನ ವಿರಾಮ ಉಲ್ಲಂಘನೆಯನ್ನು ಮಾಡಿದ್ದು, ಜಮ್ಮುವಿನ ರಜೌರಿ ಜಿಲ್ಲೆ ಗಡಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಈವರೆಗೂ ಗಡಿಯಲ್ಲಿ ಪಾಕಿಸ್ತಾನ ಸೇನೆ 25 ಬಾರಿ ಕದನ ವಿರಾಮ ಉಲ್ಲಂಘನೆಯನ್ನು ಮಾಡಿದೆ ಎಂದು ಸೇನಾ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪೂಂಚ್ ಜಿಲ್ಲೆಯಲ್ಲಿನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ. ಸೀಮಿತ ದಾಳಿ ಬಳಿಕ ನಡೆದ ದಾಳಿಯಲ್ಲಿ ಈ ವರೆಗೂ 5 ನಾಗರೀಕರು ಹಾಗೂ ನಾಲ್ಕು ಯೋಧರು ಗಾಯಗಳಾಗಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಯೋಧರೂ ದಿಟ್ಟ ಉತ್ತರವನ್ನು ನೀಡಿದ್ದು, ಪ್ರತಿದಾಳಿಗೆ 9 ಪಾಕಿಸ್ತಾನ ಯೋಧರು ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


