ಪೊಲೀಸರ ಬಳಿಯಿದ್ದ ಬಂದೂಕುಗಳನ್ನು ಕಿತ್ತುಕೊಂಡು ಪರಾರಿಯಾದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಮೇಲೆ ದಾಳಿ ಮಾಡಿದ ಉಗ್ರರು ನಂತರ ಅವರ ಬಳಿಯಿದ್ದ 5 ಬಂದೂಕುಗಳನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿರುವ ಘಟನೆ ಅನಂತನಾಗ್ ಜಿಲ್ಲೆಯ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಮೇಲೆ ದಾಳಿ ಮಾಡಿದ ಉಗ್ರರು ನಂತರ ಅವರ ಬಳಿಯಿದ್ದ 5 ಬಂದೂಕುಗಳನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿರುವ ಘಟನೆ ಅನಂತನಾಗ್ ಜಿಲ್ಲೆಯ ಟಿವಿ ಟವರ್ ಬಳಿ ಭಾನುವಾರ ರಾತ್ರಿ ನಡೆಸಿದಿದೆ.
ಕಳೆದ ರಾತ್ರಿ ಅನಂತನಾಗ್ ಜಿಲ್ಲೆಯಲ್ಲಿರುವ ಟಿವಿ ಟವರ್ ಬಳಿ ಬಂದಿರುವ ಉಗ್ರರು ಏಕಾಏಕಿ ಸ್ಥಳದಲ್ಲಿದ್ದ ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ನಂತರ ಪೊಲೀಸರ ಬಳಿಯಿದ್ದ ಐದು ಬಂದೂಕುಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪರಾರಿಯಾದ ಉಗ್ರರಿಗಾಗಿ ಈಗಾಗಲೇ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಈಗಾಗಲೇ ಭಾರತದೊಳಗೆ ನುಸುಳಿರುವ ಉಗ್ರರು ದೊಡ್ಡ ಮಟ್ಟದಲ್ಲಿಯೇ ವಿಧ್ವಂಸಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದು, ಉಗ್ರರ ಸಂಚನ್ನು ಭಾರತೀಯ ಸೇನೆ ವಿಫಲಗೊಳ್ಳುವಂತೆ ಮಾಡುತ್ತಿದೆ.
ಸೀಮಿತ ದಾಳಿಯಲ್ಲಿ ಪಾಕಿಸ್ತಾನದ ಸಾಕಷ್ಟು ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿತ್ತು. ಭಾರತದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಉಗ್ರ ಸಂಘಟನೆಗಳು ಹವಣಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವೆಡೆ ಬಿಗಿ ಭದ್ರತೆಯನ್ನು ಒದಗಿಸಿರುವುದರಿಂದ ಈಗಾಗಲೇ ಭಾರತದೊಳಗೆ ನುಸುಳಿರುವ ಉಗ್ರರಿಗೆ ಅತ್ತಿತ್ತ ಅಲುಗಾಡಲು ಸಾಧ್ಯವಾಗದೆ ಒದ್ದಾಡುವಂತಹ ಪರಿಸ್ಥಿತಿ ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


