ಸರ್ಜಿಕಲ್ ಸ್ಟ್ರೈಕ್ ಗೆ ಆರ್ ಎಸ್ ಎಸ್ ಬೋಧನೆ ಹೇಳಿಕೆಯನ್ನು ಖಂಡಿಸಿದ ಮಾಯಾವತಿ
ನಿರ್ದಿಷ್ಟ ದಾಳಿ ನಡೆಸಲು ಆದೇಶ ನೀಡುವುದರ ಹಿಂದೆ ‘ಆರ್‌ಎಸ್‌ಎಸ್‌ನ ಬೋಧನೆಗಳು’ ಪ್ರೇರಣೆಯಾಗಿದೆ ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆಗೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲಖನೌ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಿರ್ದಿಷ್ಟ ದಾಳಿ ನಡೆಸಲು ಆದೇಶ ನೀಡುವುದರ ಹಿಂದೆ ‘ಆರ್‌ಎಸ್‌ಎಸ್‌ನ ಬೋಧನೆಗಳು’ ಪ್ರೇರಣೆಯಾಗಿದೆ ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆಗೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸೇನೆ ನಡೆಸಿದ ನಿರ್ದಿಷ್ಟ ದಾಳಿಗೆ ಆದೇಶ ನೀಡುವುದರ ಹಿಂದೆ ಆರ್ ಎಸ್ಎಸ್ ನ ಬೋಧನೆಗಳು ಪ್ರೇರಣೆಯಾಗಿರಬಹುದು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿರುವುದು ದುರದೃಷ್ಟಕರ ಎಂದು ಮಾಯಾವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಸೀಮಿತ ದಾಳಿಯ ಕೀರ್ತಿಯನ್ನು ಸೇನೆಯಿಂದ ಕಸಿದುಕೊಳ್ಳುವಂತಿದೆ ಎಂದು ಮಾಯಾವತಿ ಆರೋಪಿಸಿದ್ದು, ಸೇನಾ ಕಾರ್ಯಾಚರಣೆಯಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಮಾಯಾವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಬಿಜೆಪಿ ವಿರುದ್ಧ ನಾಯಕತ್ವದ ಕೊರತೆ ಆರೋಪ ಮಾಡಿರುವ ಮಾಯಾವತಿ ಬಿಜೆಪಿ ನಾಯಕತ್ವದ ಕೊರತೆ ಎದುರಿಸುತ್ತಿದ್ದು, ಬೇರೆ ಪಕ್ಷದಿಂದ ನಾಯಕರನ್ನು ತನ್ನತ್ತ ಸೆಳೆಯುವ ಯತ್ನದಲ್ಲಿ ಬಿಜೆಪಿ ತೊಡಗಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


