ದೇಶ

ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ರೋಹಿತ್ ಕುಮಾರ್ ಪತ್ನಿ ಆತ್ಮಹತ್ಯೆಗೆ ಶರಣು

ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ರೋಹಿತ್ ಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ದಿಲ್ಲಿಯ ನಂಗೊಲೈ ಪ್ರದೇಶದಲ್ಲಿ ಸೋಮವಾರ ನಡೆದಿದೆ...

ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ರೋಹಿತ್ ಕುಮಾರ್ ಪತ್ನಿ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ರೋಹಿತ್ ಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ದಿಲ್ಲಿಯ ನಂಗೊಲೈ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ರೋಹಿತ್ ಕುಮಾರ್ ಅವರ ಪತ್ನಿ ಲಲಿತಾ (27) ಕಳೆದ ರಾತ್ರಿ ಮನೆಯೊಂದರಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  

ಸಾವಿಗೂ ಮುನ್ನ ಲಲಿತಾ ಅವರು ಡೆತ್ ನೋಟ್ ವೊಂದನ್ನು ಬರೆದಿದ್ದು, ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಪತಿ ರೋಹಿತ್ ಕಾರಣ. ರೋಹಿತ್ ನನಗೆ ಸಾಕಷ್ಟು ಹಿಂಸೆ ನೀಡುತ್ತಿದ್ದರು. ಹೀಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಹೇಳಿಕೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ರೋಹಿತ್ ಹಾಗೂ ಲಲಿತಾ ಅವರು 6 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಡೆತ್ ನೋಟ್ ನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.