ರೈತರಿಗಾಗಿ ಪರಿಸರ ನಿಯಮಗಳನ್ನು ಸಡಿಲಗೊಳಿಸಲಿರುವ ನೀತಿ ಆಯೋಗ?
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಸರ ನಿಯಮಗಳನ್ನು ಸಡಿಲಗೊಳಿಸುವ ಪ್ರಸ್ತಾವನೆಯನ್ನು ಮುಂದಿಟ್ಟಿರುವ ನೀತಿ ಆಯೋಗ, ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಿದೆ.

ನವದೆಹಲಿ: ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಸರ ನಿಯಮಗಳನ್ನು ಸಡಿಲಗೊಳಿಸುವ ಪ್ರಸ್ತಾವನೆಯನ್ನು ಮುಂದಿಟ್ಟಿರುವ ನೀತಿ ಆಯೋಗ, ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಿದೆ. ರೈತರು ತಮ್ಮ ಭೂಮಿಯಲ್ಲಿ ಬೆಳೆದಿರುವ ಮರಗಳನ್ನು ಕಡಿಯುವುದಕ್ಕೂ ಮುನ್ನ ಅನುಮತಿಯನ್ನು ಪಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಗಿಡ ನೆಡುವವರ ಸಂಖ್ಯೆ ಕುಸಿಯುತ್ತಿದ್ದು, ಮರಗಳ ಸಂಖ್ಯೆಯನ್ನು ಹೆಚ್ಚಿಸಿ, ರೈತರಿಗೆ ಅನುಕೂಲ ವಾತಾವರಣ ನಿರ್ಮಿಸಲು ಪರಿಸರ ನಿಯಮಗಳನ್ನು ಸಡಿಲಗೊಳಿಸುವುದು ನೀತಿ ಆಯೋಗದ ಉದ್ದೇಶಾವಾಗಿದೆ.
ಮರ ಕಡಿಯುವುದಕ್ಕೂ ಮುನ್ನ ಅಧಿಕಾರಿಗಳಿಂದ ಅನುಮತಿ ಪಡೆಯುವುದು ವಿಳಂಬ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ರೈತರು ತಮ್ಮ ಜಮೀನಿನಲ್ಲಿ ಹೊಸದಾಗಿ ಗಿಡಗಳನ್ನು ನೆಡಲು ಮುಂದಾಗುತ್ತಿಲ್ಲ, ಇದರಿಂದಾಗಿ ಮರಗಳ ಸಂಖ್ಯೆ ಹಾಗೂ ಮರಗಳನ್ನು ಮಾರಾಟ ಮಾಡಿದ್ದರಿಂದ ರೈತರಿಗೆ ಬರುತ್ತಿದ್ದ ಲಾಭವು ಕುಸಿತ ಕಾಣುತ್ತಿದೆ. ಈ ಬಗ್ಗೆ ಚರ್ಚಿಸಿ ಪರಿಸರ ನಿಯಮಗಳನ್ನು ಸಡಿಲಗೊಳಿಸಲು ನೀತಿ ಆಯೋಗ ಕಂದಾಯ ಇಲಾಖೆ, ಪರಿಸರ ಮತ್ತು ಅರಣ್ಯ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲಿದೆ. ಸಭೆಯಲ್ಲಿ ಪರಿಸರ ನಿಯಮ ಸಡಲಿಕೆ ಜೊತೆಗೆ ರೈತರಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


