ದೇಶ

ಕಾಟನ್ ಬಟ್ಟೆ ಕಂಪನಿ ಗೋದಾಮಿಗೆ ಬೆಂಕಿ: ಐವರ ದುರ್ಮರಣ

ಟನ್ ಬಟ್ಟೆ ಕಂಪನಿ ಗೋದಾಮಿಗೆ ಬೆಂಕಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ...

ಕಾಟನ್ ಬಟ್ಟೆ ಕಂಪನಿ  ಗೋದಾಮಿಗೆ  ಬೆಂಕಿ: ಐವರ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಪುಣೆ: ಕಾಟನ್ ಬಟ್ಟೆ  ಕಂಪನಿ ಗೋದಾಮಿಗೆ  ಬೆಂಕಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ.

ಪುಣೆಯಿಂದ 45 ಕಿಮೀ ದೂರದ ಹೊರವಲಯಲ್ಲಿರುವ ಕರಬ್ವಾಡಿಯಲ್ಲಿ ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ, ಗೋಡೋನ್ ನಲ್ಲಿದ್ದ ಕಾರ್ಮಿಕರು ಹೊರ ಬರಲಾಗದಂತೆ ಕೆಲವೇ ಕ್ಷಣದಲ್ಲಿ ಬೆಂಕಿ ಎಲ್ಲೆಡೆ ಆವರಿಸಿಕೊಂಡಿದೆ. ಗೋದಾಮಿನಲ್ಲಿದ್ದ ಐವರು ಕೆಲಸಗಾರರು ಹೇಗೋ ಬೆಂಕಿಯಿಂದ ತಪ್ಪಿಸಿಕೊಂಡು ಹೊರ ಬಂದಿದ್ದಾರೆ.

ಸ್ಥಳಕ್ಕಾಗಮಿಸಿದ ಐದು ಅಗ್ನಿಶಾಮಕ ವಾಹನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ, ಮೃತ ಪಟ್ಟ ಐವರು ಕಂಪನಿಯ ಕೆಲಸಗಾರರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.