ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆಯನ್ನು ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೂಂಚ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ಹೇಳಿದ್ದಾರೆ. ಅ.20 ರಂದೂ ಸಹ ಭಾರತೀಯ ಸೇನೆ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗಳಿಸಿತ್ತು.
2-3 ವ್ಯಕ್ತಿಗಳ ಅನುಮಾನಾಸ್ಪದ ನಡೆಯನ್ನು ಗುರುತಿಸಿದ್ದ ಸೇನೆ, ಭಾರತದ ಗಡಿಯೊಳಗೆ ನುಸುಳದಂತೆ ಎಚ್ಚರಿಕೆ ವಹಿಸಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ. ಈ ವೇಳೆ ಉಗ್ರರು ಹಾಗೂ ಸೇನಾ ಪಡೆ ನಡುವೆ ಗುಂಡಿನ ಚಕಮಕಿ ಸಹ ನಡೆದಿದ್ದು ಸೇನೆ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ಅ.20 ರಂದು 4-6 ಭಯೋತ್ಪಾದಕರು ಭಾರತದೊಳಗೆ ನುಸುಳಲು ಯತ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


