ದೇಶ

2017ಕ್ಕೆ ಪ್ರಾದೇಶಿಕ ಸಂಪರ್ಕ ಯೋಜನೆಯ ಮೊದಲ ವಿಮಾನ ಕಾರ್ಯನಿರ್ವಹಣೆ

ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಮೊದಲ ವಿಮಾನದ ಕಾರ್ಯನಿರ್ವಹಣೆ 2017 ರ ಜನವರಿಯಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2017ಕ್ಕೆ ಪ್ರಾದೇಶಿಕ ಸಂಪರ್ಕ ಯೋಜನೆಯ ಮೊದಲ ವಿಮಾನ ಕಾರ್ಯನಿರ್ವಹಣೆ
2017ಕ್ಕೆ ಪ್ರಾದೇಶಿಕ ಸಂಪರ್ಕ ಯೋಜನೆಯ ಮೊದಲ ವಿಮಾನ ಕಾರ್ಯನಿರ್ವಹಣೆ
Published On :

ನವದೆಹಲಿ: ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಮೊದಲ ವಿಮಾನದ ಕಾರ್ಯನಿರ್ವಹಣೆ  2017 ರ ಜನವರಿಯಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ವಿಮಾನ ಸಂಪರ್ಕವನ್ನು ಕಾಣದ ಪ್ರದೇಶಗಳಿಗೆ ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ವಿಮಾನ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದ್ದು, ಯುಡಿಎಎನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಎಂಬ ಹೆಸರಿನಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 10 ವರ್ಷಗಳ ವರೆಗೆ ಕಾರ್ಯನಿರ್ವಹಿಸಲಿದೆ.
ಯುಡಿಎಎನ್ ಯೋಜನೆಯ ಮೊದಲ ವಿಮಾನ 2017 ರ ಜನವರಿಯಿಂದ ಕಾರ್ಯನಿರ್ವಹಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪಿ ಅಶೋಕ್ ಗಜಪತಿ ರಾಜು ತಿಳಿಸಿದ್ದಾರೆ. ಹೊಸ ಯೋಜನೆ ಇತ್ತೀಚೆಗಷ್ಟೇ ಅಂಗೀಕರಿಸಲಾದ ರಾಷ್ಟ್ರೀಯ ನಾಗರಿಕ ವಿಮಾನಯಾನ ನೀತಿಯ ಪ್ರಮುಖ ಅಂಶವಾಗಿದ್ದು, ಪ್ರಾದೇಶಿಕ ವಿಮಾನ ಸಂಪರ್ಕವನ್ನು ಹೆಚ್ಚು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ತೀರಾ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುತ್ತಿರುವ ವಿಮಾನ ನಿಲ್ದಾಣ, ರನ್‌ವೇಗಳಿಂದ ಇನ್ನೊಂದು ಊರಿಗೆ ವಿಮಾನ ಸಂಪರ್ಕ ಕಲ್ಪಿಸುವ ಕಂಪೆನಿಗಳಿಗೆ ಈ ಯೋಜನೆಯ ಅಡಿ ಹಣಕಾಸಿನ ನೆರವು ಸಿಗುತ್ತದೆ. ತೆರಿಗೆ ವಿನಾಯಿತಿ ಕೂಡ ಲಭ್ಯವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.