ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ, ಮೂವರು ಸಿಲುಕಿರುವ ಶಂಕೆ
8 ಮಂದಿಯನ್ನು ಬಲಿ ಪಡೆದ ಶವಕಾಶಿ ಪಟಾಕಿ ದುರಂತದ ನಂತರ ತಮಿಳುನಾಡಿನಲ್ಲಿ ಶುಕ್ರವಾರ ಮತ್ತೊಂದು ಅಗ್ನಿ ಅವಘಡ...

Published On :
ಕೊಯಂಬತ್ತೂರು: 8 ಮಂದಿಯನ್ನು ಬಲಿ ಪಡೆದ ಶವಕಾಶಿ ಪಟಾಕಿ ದುರಂತದ ನಂತರ ತಮಿಳುನಾಡಿನಲ್ಲಿ ಶುಕ್ರವಾರ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೊಯಂಬತ್ತೂರಿನ ಗಾಂಧಿ ಪಾರ್ಕ್ ಬಳಿಯಿರುವ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ, ಹಲವು ಮಂದಿ ಗಾಯಗೊಂಡಿದ್ದಾರೆ ಮತ್ತು ಮೂವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಗಾಂಧಿ ಪಾರ್ಕ್ ಬಳಿಯಿರುವ ಕಟ್ಟಡದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಗೋದಾಮಿನಲ್ಲಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿ ಧಾವಿಸಿದ್ದು, 7 ಮಂದಿ ರಕ್ಷಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳೊಂದಿಗೆ ಆಗಮಿಸಿರುವ ಸಿಬಂದಿಗಳು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


