ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆ?
ಕೇಂದ್ರ ಸರ್ಕಾರ ಸಿಬಿಎಸ್ ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆಯನ್ನು ಪುನಃ ಪ್ರಾರಂಭಿಸುವ ಸಾಧ್ಯತೆ ಇದೆ.

ನವದೆಹಲಿ: ಕೇಂದ್ರ ಸರ್ಕಾರ ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆಯನ್ನು ಪುನಃ ಪ್ರಾರಂಭಿಸುವ ಸಾಧ್ಯತೆ ಇದೆ.
ಅ.25 ರಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದು, 2018 ರಿಂದ ಸಿಬಿಎಸ್ಇ ಪಠ್ಯಕ್ರಮದ 10 ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ.
ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯನ್ನು ಬರೆಯುವ ಪದ್ಧತಿಯನ್ನು 2010 ರಲ್ಲಿ ಅಂದಿನ ಯುಪಿಎ ಸರ್ಕಾರ ತೆಗೆದುಹಾಕಿತ್ತು. ಬೋರ್ಡ್ ಪರೀಕ್ಷೆ ತೆಗೆದುಹಾಕಿರುವುದು ಶಿಕ್ಷಣದ ಗುಣಮಟ್ಟವನ್ನು ಕುಗ್ಗಿಸಿದೆ ಎಂಬ ಅಭಿಪ್ರಾಯ ಶಾಲಾ ಶಿಕ್ಷಕರು ಹಾಗೂ ಪೋಷಕರಿಂದ ವ್ಯಾಪಕವಾಗಿ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್ ಸಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಪ್ರಾರಂಭಿಸುವ ತೀರ್ಮಾನಕ್ಕೆ ಬಂದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇದೆ ವೇಳೆ 5 ನೇ ತರಗತಿ ವರೆಗೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಬಡ್ತಿ ನೀಡುವ 'ನೋ- ಡಿಟೆನ್ಷನ್' ನೀತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


