ದೇಶ

ಒಡಿಶಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಭುವನೇಶ್ವರದ ಎಸ್ ಯುಎಂ ಆಸ್ಪತ್ರೆಯ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ...

ಒಡಿಶಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 24ಕ್ಕೆ ಏರಿಕೆ
ಗಾಯಾಳುವನ್ನು ಮತ್ತೊಂದು ಆಸ್ಪತ್ರೆ ಸಾಗಿಸುತ್ತಿರುವುದು
Published On :
ಭುವನೇಶ್ವರ: ಭುವನೇಶ್ವರದ ಎಸ್ ಯುಎಂ ಆಸ್ಪತ್ರೆಯ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಮೃತರನ್ನು ಭುವನೇಶ್ವರದ ದುಮುದುಮಾದ ಬಿಸ್ವನಾಥ್ ಬೆಹ್ರಾ ಹಾಗೂ ಪುರಿ ಜಿಲ್ಲೆಯ ಬಲಿಪಾಡ್ ನ ರಶ್ಮಿತಾ ಸ್ವೈನ್ ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ನಿನ್ನೆಯಷ್ಟೇ ಆಸ್ಪತ್ರೆಯ ಮಾಲೀಕ ಮನೋಜ್ ನಾಯಕ್ ಅವರನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಮನೋಜ್ ನಾಯಕ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಖಂದಗಿರಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಆಸ್ಪತ್ರೆಗೆ ಭೇಟಿ ನೀಡಿ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದರು. ಆ ನಂತರ ಪೊಲೀಸರು ಆರೋಪಿಗಳ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.