ದೇಶ

ದೆಹಲಿ: ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ರಾಜಧಾನಿ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ...

ದೆಹಲಿ: ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಗುರು ತೇಜ್ ಬಹದ್ದೂರ್ ಆಸ್ಪತ್ರೆ (ಸಂಗ್ರಹ ಚಿತ್ರ)
Published On :

ನವದೆಹಲಿ: ರಾಜಧಾನಿ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ.

ಗುರು ತೇಜ್ ಬಹದ್ದೂರ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಆಸ್ಪತ್ರೆಯ 1104 ಸಂಖ್ಯೆಯ ಕೊಠಡಿಯಲ್ಲಿ ಇಂದು ಬೆಳಿಗಿನ ಜಾವ 3.35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿ 15 ಮಕ್ಕಳು ದಾಖಲಾಗಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಈಗಾಗಲೇ ಸ್ಥಳಕ್ಕೆ ದೌಡಾಯಿಸಿರುವ 6-7 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕೆಲಸವನ್ನು ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದಷ್ಟೇ ಒಡಿಶಾದ ಖಾಸಗಿ ಆಸ್ಪತ್ರೆಯಲ್ಲೂ ಬೆಂಕಿ ದುರಂತವೊಂದು ಸಂಭವಿಸಿತ್ತು. ದುರ್ಘಟನೆಯಲ್ಲಿ 24 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿತ್ತು. ಪ್ರಕರಣ ಸಂಬಂಧ ಒಡಿಶಾ ಆರೋಗ್ಯ ಸಚಿವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.