ಯೋಧರ ತ್ಯಾಗಕ್ಕೆ ಗುರ್ನಾಮ್ ಸಿಂಗ್ ಉತ್ತಮ ನಿದರ್ಶನ: ರಾಜನಾಥ ಸಿಂಗ್
ಗಡಿಯಲ್ಲಿ ಗುಂಡಿನ ಚಕಮಕಿ ವೇಳೆ ದೇಶಕ್ಕಾಗಿ ಹೋರಾಡಿ ಹುತಾತ್ಮನಾಗಿರುವ ಗುರ್ನಾಮ್ ಸಿಂಗ್ ಅವರು ಯೋಧರ ತ್ಯಾಗಕ್ಕೆ ಉತ್ತಮ ನಿದರ್ಶನರಾಗಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್...

ನವದೆಹಲಿ: ಗಡಿಯಲ್ಲಿ ಗುಂಡಿನ ಚಕಮಕಿ ವೇಳೆ ದೇಶಕ್ಕಾಗಿ ಹೋರಾಡಿ ಹುತಾತ್ಮನಾಗಿರುವ ಗುರ್ನಾಮ್ ಸಿಂಗ್ ಅವರು ಯೋಧರ ತ್ಯಾಗಕ್ಕೆ ಉತ್ತಮ ನಿದರ್ಶನರಾಗಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬಿಎಸ್ಎಫ್ ಯೋಧ ಗುರ್ನಾಮ್ ಸಿಂಗ್ ಅವರ ಅಗಲಿಕೆ ಸಾಕಷ್ಟು ನೋವನ್ನುಂಟು ಮಾಡಿದೆ. ಯೋಧರ ತ್ಯಾಗಕ್ಕೆ ಗುರ್ನಾಮ್ ಅವರು ಉದಾಹರಣೆಯಾಗಿದ್ದಾರೆ. ಹುತಾತ್ಮ ಯೋಧನ ಕುಟುಂಬ ಕುರಿತು ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.
ಅ.20ರಂದು ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗುರ್ನಾಮ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದರು. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಓರ್ವ ಉಗ್ರ ಸೇರಿದಂತೆ 7 ಸೈನಿಕರನ್ನು ಹತ್ಯೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


