ವಿದೇಶಿ ಬಂಡವಾಳದ ಏರಿಕೆಯಲ್ಲಿ ವಿದೇಶಾಂಗ ಸಚಿವಾಲಯದ ಕೊಡುಗೆ: ಸುಷ್ಮಾ ಸ್ವರಾಜ್
ವಿದೇಶಾಂಗ ಇಲಾಖೆಯ ಕಾರ್ಯವೈಖರಿ ಬದಲಾಗುತ್ತಿದ್ದು, ಕೇವಲ ರಾಜತಾಂತ್ರಿಕ ವಿಷಯಗಳಿಗೆ ಮಾತ್ರ ಸೀಮಿತವಾಗದೇ ರಾಷ್ಟ್ರದ ಅಭಿವೃದ್ಧಿಯತ್ತಲೂ ಗಮನ ಹರಿಸುತ್ತಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಇಂದೋರ್: ವಿದೇಶಾಂಗ ಇಲಾಖೆಯ ಕಾರ್ಯವೈಖರಿ ಬದಲಾಗುತ್ತಿದ್ದು, ಕೇವಲ ರಾಜತಾಂತ್ರಿಕ ವಿಷಯಗಳಿಗೆ ಮಾತ್ರ ಸೀಮಿತವಾಗದೇ ರಾಷ್ಟ್ರದ ಅಭಿವೃದ್ಧಿಯತ್ತಲೂ ಗಮನ ಹರಿಸುತ್ತಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಇಂದೋರ್ ನಲ್ಲಿ ಎರಡು ದಿನಗಳ ಕಾಲ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್, ವಿದೇಶಾಂಗ ಸಚಿವಾಲಯದ ಕಾರ್ಯವಿಧಾನ ಮತ್ತಷ್ಟು ಪರಿಷ್ಕೃತಗೊಂಡಿರುವುದರಿಂದ ಭಾರತಕ್ಕೆ ಹರಿದುಬರುತ್ತಿರುವ ವಿದೇಶಿ ಬಂಡವಾಳ ಹೂಡಿಕೆ ಏರಿಕೆಯ ಶೇ.53 ರಷ್ಟರಲ್ಲಿ ವಿದೇಶಾಂಗ ಇಲಾಖೆಯ ಕೊಡುಗೆಯು ಇದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಇದೆ ಮೊದಲ ಬಾರಿಗೆ ವಿದೇಶಾಂಗ ಸಚಿವಾಲಯ ರಾಷ್ಟ್ರದ ಅಭಿವೃದ್ಧಿಯತ್ತಲೂ ಗಮನ ಹರಿಸಿದೆ. ದೇಶಿಯ ಅಭಿವೃದ್ಧಿ ಈ ಹಿಂದೆ ವಿದೇಶಾಂಗ ಸಚಿವಾಲಯದ ಕಾರ್ಯಸೂಚಿಯಲ್ಲಿ ಇರಲಿಲ್ಲ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಈ ಹಿಂದೆ ವಿದೇಶಾಂಗ ಸಚಿವಾಲಯ ಕೇವಲ ರಾಜತಾಂತ್ರಿಕ ವಿಷಯಗಳ ಬಗ್ಗೆ ಮಾತ್ರ ಗಮನ ಹರಿಸುತ್ತಿತ್ತು. ಆದರೆ ಈಗ ರಾಜತಾಂತ್ರಿಕ ವಿಷಯಗಳೊಂದಿಗೆ ಆರ್ಥಿಕ ಬಲವರ್ಧನೆಯತ್ತಲೂ ವಿದೇಶಾಂಗ ಇಲಾಖೆ ಗಮನ ಹರಿಸುತ್ತಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


