ಪ್ರಾದೇಶಿಕ ಸಂಪರ್ಕ ಯೋಜನೆಯಿಂದ ಭಾರತ ವಿಶ್ವದ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಲಿದೆ: ಮೋದಿ
ಪ್ರಾದೇಶಿಕ ವಿಮಾನ ಸಂಪರ್ಕ ಯೋಜನೆಯಿಂದ ಭಾರತ ವಿಶ್ವದ ಮೂರನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಡೋದರ: ಕೇಂದ್ರ ಸರ್ಕಾರ ಹೊಸ ನಾಗರಿಕ ವಿಮಾನಯಾನ ನೀತಿಗಳ ಅಡಿಯಲ್ಲಿ ಜಾರಿಗೆ ತರಲಿರುವ ಪ್ರಾದೇಶಿಕ ವಿಮಾನ ಸಂಪರ್ಕ ಯೋಜನೆಯಿಂದ ಭಾರತ ವಿಶ್ವದ ಮೂರನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುಜರಾತ್ ನ ವಡೋದರಾದಲ್ಲಿ ಎರಡನೇ ಹಸಿರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ವಿಮಾನಯಾನ ಮಾಡುವ ಮಧ್ಯಮ ವರ್ಗದ ಕುಟುಂಬಗಳ ಕನಸು ಸುಲಭವಾಗಿ ಈಡೇರಲಿದ್ದು, ಪ್ರಾದೇಶಿಕ ಸಂಪರ್ಕ ಯೋಜನೆಯಿಂದ ಭಾರತ ವಿಶ್ವದ ಮೂರನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಿ ಪರಿವರ್ತನೆಯಾಗಲಿದೆ ಎಂದು ಹೇಳಿದ್ದಾರೆ.
ಟೈರ್ -2, ಟೈರ್-3 ಹ೦ತದ ನಗರಗಳು ವಿಮಾನಯಾನ ನಕ್ಷೆಯಲ್ಲಿ ಬರುವಂತಾದರೆ ದೇಶದ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದೆ. ಈ ಹಿಂದಿನ ಕೇಂದ್ರ ಸರ್ಕಾರಗಳಿಗೆ ವಿಮಾನಯಾಕ್ಕೆ ಸಂಬಂಧಿಸಿದಂತೆ ದೂರದೃಷ್ಟಿ ಇರಲಿಲ್ಲ, ನಮ್ಮ ಸರ್ಕಾರ ವಿಮಾನಯಾನ ಕ್ಷೇತ್ರವನ್ನು ವಿಸ್ತರಿಸುವುದಕ್ಕೆ ಅವಿರತ ಶ್ರಮದಿಂದ ಕೆಲಸ ನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟೈರ್-2, ಟೈರ್-3 ಹಂತದ ನಗರಗಳಲ್ಲಿ ಪ್ರಾದೇಶಿಕ ಸಂಪರ್ಕ ಯೋಜನೆಯನ್ನು ತರುವುದರಿಂದ 500 ಕಿಮಿ ದೂರದ ವರೆಗೆ ಜನರು ಕೇವಲ 2,500 ರೂ ಗಳ ಟಿಕೆಟ್ ದರದಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


