ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ: ಫಿಲಿಫೈನ್ಸ್ ಮೂಲದ ನಾಲ್ವರು ಬಂಧನ
ನಿಷೇಧಿತ ಸ್ಯಾಟಲೈಟ್ ಫೋನ್ ಗಳನ್ನು ಬಳಕೆ ಮಾಡುತ್ತಿದ್ದ ನಾಲ್ಕು ಫಿಲಿಫೈನ್ಸ್ ಮೂಲದ ವ್ಯಕ್ತಿಗಳನ್ನು ಒಡಿಶಾ ಪೊಲೀಸರು ಬಂಧನಕ್ಕೊಳಪಡಿಸಿರುವುದಾಗಿ...

ಬೆರ್ಹಾಮ್ಪುರ್: ನಿಷೇಧಿತ ಸ್ಯಾಟಲೈಟ್ ಫೋನ್ ಗಳನ್ನು ಬಳಕೆ ಮಾಡುತ್ತಿದ್ದ ನಾಲ್ಕು ಫಿಲಿಫೈನ್ಸ್ ಮೂಲದ ವ್ಯಕ್ತಿಗಳನ್ನು ಒಡಿಶಾ ಪೊಲೀಸರು ಬಂಧನಕ್ಕೊಳಪಡಿಸಿರುವುದಾಗಿ ತಿಳಿದುಬಂದಿದೆ.
ಬಂಧಿತ ಫಿಲಿಫೈನ್ಸ್ ಮೂಲದ ನಾಲ್ವರು, ನಿಷೇಧಿತ ಥುರಾಯಾ ಸ್ಯಾಟಲೈಟ್ ಫೋನ್ ಗಳನ್ನು ಬಳಕೆ ಮಾಡುತ್ತಿದ್ದು, ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕೂಡಲೇ ನಾಲ್ವರನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಿಷೇಧಿತ ಈ ಸ್ಯಾಟಲೈಟ್ ಫೋನ್ ಜಮ್ಮು ಮತ್ತು ಕಾಶ್ಮೀರದ ಉಗ್ರ ಸಂಘಟನೆಗಳು ಬಳಕೆ ಮಾಡುತ್ತಿದ್ದವು. 26/11 ಮುಂಬೈ ಉಗ್ರ ದಾಳಿ ಬಳಿಕ ಈ ಸ್ಯಾಟಲೈಟ್ ಫೋನ್ ಗಳ ಮೇಲೆ ನಿಷೇಧ ಹೇರಲಾಗಿತ್ತು.
ಬಂಧಿತ ನಾಲ್ವರನ್ನು ಶೀಘ್ರದಲ್ಲಿಯೇ ಛತ್ರಾಪುರದ ಎಸ್ ಡಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


