ದೇಶ

ಮಣಿಪುರ ಸಿಎಂ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಣಿಪುರ ಸಿಎಂ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು
ಮಣಿಪುರ ಸಿಎಂ ಒಕ್ರೋಮ್ ಇಬೋಬಿ ಸಿಂಗ್ (ಸಂಗ್ರಹ ಚಿತ್ರ)
Published On :

ಇಂಫಾಲ: ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ  ಪಾರಾಗಿದ್ದಾರೆ.

ಇಂದು ಮುಂಜಾನೆಯಷ್ಟೇ ಉಖ್ರುಲ್ ಜಿಲ್ಲೆಯಲ್ಲಿ ಸರಣಿ ಐಇಡಿ ಬಾಂಬ್ ಸ್ಫೋಟಗೊಂಡು ಇಬ್ಬರು ಯೋಧರು ಗಾಯಗೊಂಡಿದ್ದರು. ಇದಾದ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಒಕ್ರೋಮ್  ಇಬೋಬಿ ಸಿಂಗ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಸಿಎಂ ಒಕ್ರೋಮ್ ಇಬೋಬಿ ಸಿಂಗ್ ಅವರು ಉಖ್ರುಲ್ ಜಿಲ್ಲೆಗೆ  ಭೇಟಿ ನೀಡಿದ್ದರು. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಇಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಅದೃಷ್ಟವಶಾತ್ ಗುಂಡು ಗುರಿ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಒಕ್ರೋಮ್ ಇಬೋಬಿ ಸಿಂಗ್ ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಘಟನಾ ಸ್ಥಳದ ಸುತ್ತಮುತ ಪೊಲೀಸರ  ಶೋಧ ಕಾರ್ಯ ನಡೆಸುತ್ತಿದ್ದು, ಶಂಕಿತರಿಗಾಗಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಜೀವಂತ ಬಾಂಬ್ ನಿಷ್ಕ್ರಿಯ

ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ಆವರಣದಲ್ಲಿ ಜೀವಂತ ಬಾಂಬ್ ವೊಂದು ಪತ್ತೆಯಾಗಿದ್ದು, ಅದನ್ನು ಸಿಬ್ಬಂದಿಗಳು ನಿಷ್ಕ್ರಿಯ ಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.