ಭೋಪಾಲ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ
ಮಧ್ಯಪ್ರದೇಶ ರಾಜ್ಯದ ಭೋಪಾಲ್ ನ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಸೋಮವಾರ ಬೆಳಗಿನ ಜಾವ...

ಭೋಪಾಲ್: ಮಧ್ಯಪ್ರದೇಶ ರಾಜ್ಯದ ಭೋಪಾಲ್ ನ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಹನುಮಾನ್ ಗುಂಜ್ ನಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ 35ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಇಂದು ಬೆಳಿಗ್ಗೆ 2 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಆದರೆ, ಕರೆ ಮಾಡಿ 2 ಗಂಟೆಗಳ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಬಂದರು. ಸ್ಥಳಕ್ಕೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
ಬೆಳಗಿನ ಜಾವ 4 ಗಂಟೆಯಿಂದಲೇ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬರಲಾಯಿತು. ಬೆಂಕಿ ನಿಯಂತ್ರಣಕ್ಕೆ ತರಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


