ಕುಪ್ವಾರದಲ್ಲಿ ಓರ್ವ ಉಗ್ರನನ್ನು ಸದೆಬಡಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಓರ್ವ ಉಗ್ರನನ್ನು ಯೋಧರು ಹತ್ಯೆ ಮಾಡಿರುವುದಾಗಿ ಸೋಮವಾರ ತಿಳಿದುಬಂದಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಓರ್ವ ಉಗ್ರನನ್ನು ಯೋಧರು ಹತ್ಯೆ ಮಾಡಿರುವುದಾಗಿ ಸೋಮವಾರ ತಿಳಿದುಬಂದಿದೆ.
ಕುಪ್ವಾರದಲ್ಲಿರುವ ವಾರ್ನೌ ಗ್ರಾಮದ ಮನೆಯೊಂದರಲ್ಲಿ ಉಗ್ರನೋರ್ವ ಅಡಗಿ ಕುಳಿತಿದ್ದ. ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಉಗ್ರನನ್ನು ಸದೆಬಡಿಯಲು ಕಾರ್ಯಾಚರಣೆಗಿಳಿದಿತ್ತು.
ಉಗ್ರ ಅಡಗಿ ಕುಳಿತಿದ್ದ ಮನೆಯತ್ತ ಸೇನೆ ತೆರಳುತ್ತಿದ್ದಂತೆಯೇ, ಅಡಗಿ ಕುಳಿತಿದ್ದ ಉಗ್ರ ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದ. ಈ ವೇಳೆ ಯೋಧರು ಎನ್ ಕೌಂಟರ್ ಮಾಡುವ ಮೂಲಕ ಉಗ್ರನನ್ನು ಹತ್ಯೆ ಮಾಡಿದೆ. ಹತ್ಯೆಯಾದ ಉಗ್ರನ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


