ರಾಹುಲ್ ಗಾಂಧಿ ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ: ಅಂಬಿಕಾ ಸೋನಿ
ರಾಹುಲ್ ಗಾಂಧಿ ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ ಎಂದು ಪಕ್ಷದ ನಾಯಕ ಅಂಬಿಕಾ ಸೋನಿ ಹೇಳಿದ್ದಾರೆ.

ಶಿಮ್ಲಾ: ರಾಹುಲ್ ಗಾಂಧಿ ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ ಎಂದು ಪಕ್ಷದ
ನಾಯಕಿ ಅಂಬಿಕಾ ಸೋನಿ ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ಅಂಬಿಕಾ ಸೋನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ ಕಾಂಗ್ರೆಸ್ ನ ಸಭೆಯಲ್ಲಿ ಭಾಗವಹಿಸಲು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರೊಂದಿಗೆ ಶಿಮ್ಲಾಗೆ ಆಗಮಿಸಿದ್ದ ವೇಳೆ ಅಂಬಿಕಾ ಸೋನಿ ಹೇಳಿಕೆ ನೀಡಿದ್ದು, ಹಿಮಾಚಲ ಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯನ್ನು ಸಿಎಂ ವೀರಭದ್ರ ಸಿಂಗ್ ಅವರ ನೇತೃತ್ವದಲ್ಲಿ ಎದುರಿಸುವುದಾಗಿ ಹೇಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು ವೀರಭದ್ರ ಸಿಂಗ್ 7 ನೇ ಬಾರಿಗೆ ಸಿಎಂ ಆಗಲಿದ್ದಾರೆ ಎಂದು ಅಂಬಿಕಾ ಸೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


