ತ್ರಿವಳಿ ತಲಾಕ್ ಮುಸ್ಲಿಮರ ಆಂತರಿಕ ವಿಷಯ: ಆರ್ ಎಸ್ಎಸ್
ತ್ರಿವಳಿ ತಲಾಕ್ ನ್ನು ಮುಸ್ಲಿಮರ ಆಂತರಿಕ ವಿಷಯ ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಇಂತಹ ಲಿಂಗ ತಾರತಮ್ಯಗಳನ್ನು ವಿರೋಧಿಸುವುದಾಗಿ ಸ್ಪಷ್ಟಪಡಿಸಿದೆ.

ಹೈದರಾಬಾದ್: ತ್ರಿವಳಿ ತಲಾಕ್ ನ್ನು ಮುಸ್ಲಿಮರ ಆಂತರಿಕ ವಿಷಯ ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಇಂತಹ ಲಿಂಗ ತಾರತಮ್ಯಗಳನ್ನು ವಿರೋಧಿಸುವುದಾಗಿ ಸ್ಪಷ್ಟಪಡಿಸಿದೆ.
ತ್ರಿವಳಿ ತಲಾಕ್ ಬಗ್ಗೆ ಮಾತನಾಡಿರುವ ಆರ್ ಎಸ್ ಎಸ್ ನ ಸುರೇಶ್ ಜೋಷಿ, ತಲಾಕ್ ಮುಸ್ಲಿಂ ಸಮುದಾಯದ ಆಂತರಿಕ ವಿಷಯವಾಗಿದ್ದು, ಅದರ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಮೂರು ದಿನಗಳ ಅಖಿಲ ಭಾರತ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ.
ಆಧುನಿಕ ಜಗತ್ತಿನಲ್ಲಿ ಯಾವುದೇ ರೀತಿಯ ಲಿಂಗ ತಾರತಮ್ಯ ಸರಿಯಲ್ಲ. ಮುಸ್ಲಿಂ ಮಹಿಳೆಯರಿಗೆ ನ್ಯಾಯ ಸಿಗಲಿ ಎಂದು ಆಶಿಸುತ್ತೇವೆ ಎಂದು ಸುರೇಶ್ ಜೋಷಿ ಹೇಳಿದ್ದಾರೆ. ಇನ್ನು ಏಕರೂಪ ನಾಗರಿಕ ಸಂಹಿತೆ ಬಗ್ಗೆಯೂ ಮಾತನಾಡಿರುವ ಸುರೇಶ್ ಜೋಷಿ, ಆರ್ ಎಸ್ ಎಸ್ ಹಿಂದಿನಿಂದಲೂ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸ್ಪಷ್ಟ ನಿಲುವು ಹೊಂದಿದ್ದು ಕಾನೂನು ಯಾವುದೇ ರೀತಿಯ ತಾರತಮ್ಯ ತೋರಬಾರದು ಎಂಬುದು ಆರ್ ಎಸ್ಎಸ್ ನ ಅಭಿಪ್ರಾಯ ಎಂದಿದ್ದಾರೆ. ಇದೆ ವೇಳೆ ರಾಮಮಂದಿರದ ಬಗ್ಗೆಯೂ ಮಾತನಾಡಿರುವ ಸುರೇಶ್ ಜೋಷಿ, ಉತ್ತರ ಪ್ರದೇಶದಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಬೇಕಿರುವುದು ಪ್ರತಿಯೊಬ್ಬ ಹಿಂದೂವಿನ ಆಶಯವಾಗಿದೆ. ಆದರೆ ಈ ಆಶಯ ಈಡೇರಬೇಕಾದರೆ ಕಾನೂನಿನ ಎಲ್ಲಾ ಅಡೆತಡೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


