ಆಪ್ ಶಾಸಕ ಅಮಾನತುಲ್ಲಾ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲು
ಮಹಿಳೆಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಅವರ ವಿರುದ್ಧ ಮತ್ತೊಂದು...

ನವದೆಹಲಿ: ಮಹಿಳೆಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಜಾಮೀಯಾ ನಗರ ಪೊಲೀಸರು ಓಕ್ಲಾ ಶಾಸಕ ಅಮಾನತುಲ್ಲಾ ಅವರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಜುಲೈ 16 ರಂದು ಹಲವು ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಶಾಸಕ ಅಮಾನತುಲ್ಲಾ ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರ ಗುಂಪೊಂದು ದೂರು ನೀಡಿತ್ತು.
ಇನ್ನು ಮಹಿಳೆಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಸೇರಿರುವ ಅಮಾನತುಲ್ಲಾ ಅವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


