ಕೇಂದ್ರ ಸರ್ಕಾರ ಸೇನಾ ವಿರೋಧಿ: ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಸೇನಾ ವಿರೋಧಿ ಎಂದಿದ್ದು, ಸೇನಾ ಕಾರ್ಯಾಚರಣೆಗಳನ್ನು ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಸೇನಾ ವಿರೋಧಿ ಎಂದಿದ್ದು, ಸೇನಾ ಕಾರ್ಯಾಚರಣೆಗಳನ್ನು ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ಕ್ಷೀಣಿಸಿದ ಒಆರ್ ಒಪಿ, ಅಂಗವೈಕಲ್ಯ ಪಿಂಚಣಿಯಲ್ಲಿ ಕಡಿತ, ಈಗ ಸೇನಾ ಕಾರ್ಯಾಚರಣೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು, ಇವೆಲ್ಲವೂ ಕೇಂದ್ರ ಸರ್ಕಾರ ಸೇನಾ ವಿರೋಧಿ ಎಂಬುದನ್ನು ತೋರುತ್ತಿಲ್ಲವೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಶ್ರೇಣಿ ತಾರತಮ್ಯದ ಬಗ್ಗೆ ರಕ್ಷಣಾ ಸಚಿವಾಲಯದ ಪತ್ರ ಉಲ್ಲೇಖಿಸಿ ಮಾಧ್ಯಮ ವರದಿ ಪ್ರಕಟವಾದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಸೇನಾ ವಿರೋಧಿ ಎಂದು ಟೀಕಿಸಿದ್ದಾರೆ. ಈಗ ನಿವೃತ್ತಿ ಪಡೆಯುವ ಯೋಧರಿಗೆ ಸರಿಸಮನಾದ ಪಿಂಚಣಿಯನ್ನು ಈಗಾಗಲೇ ನಿವೃತ್ತರಾದ ಯೋಧರಿಗೆ ನೀಡುವುದು ಒಆರ್ ಒಪಿ ಉದ್ದೇಶವಾಗಿದೆ. ಶೇ.100 ರಷ್ಟು ಅಂಗವೈಕಲ್ಯ ಹೊಂದಿರುವ ಯೋಧರು ಸೇವೆಯಲ್ಲಿದ್ದಾಗಿನಷ್ಟೇ ಪಿಂಚಣಿ ಪಡೆಯಲಿದ್ದಾರೆ. ಆದರೆ ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೊಳಿಸಿದ ಸ್ಲಾಬ್ ವ್ಯವಸ್ಥೆಯ ಅನುಗುಣವಾಗಿ ಅಂಗವೈಕಲ್ಯಕ್ಕೀಡಾದ ಯೋಧರಿಗೆ ಪಿಂಚಣಿ ಕಡಿಮೆಯಾಗಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ನಂತರ ಹಿಂದಿನ ವ್ಯವಸ್ಥೆಯನ್ನೇ ಮುಂದುವರೆಸುವಂತೆ ರಕ್ಷಣಾ ಸಚಿವಾಲಯ 7 ನೇ ವೇತನ ಆಯೋಗಕ್ಕೆ ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


