ಜೆಎನ್ ಯು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನಿಗೂಢ ಸಾವು!
ದೆಹಲಿಯ ಪ್ರತಿಷ್ಛಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ದೆಹಲಿಯ ಪ್ರತಿಷ್ಛಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಮಂಗಳವಾರ ಸಂಜೆ ವಿದ್ಯಾರ್ಥಿ ಮಣಿಪುರ ಮೂಲದ ಜೆಆರ್ ಫಿಲೆಮಾನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಪಿಎಚ್ ಡಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಕಳೆದ ಮೂರು ದಿನಗಳಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ. ವಿವಿ ಆವರಣದಲ್ಲಿರುವ ಬ್ರಹ್ಮಪುತ್ರ ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ವಿದ್ಯಾರ್ಥಿ ಫಿಲೆಮಾನ್ ಶವಪತ್ತೆಯಾಗಿದ್ದು, ಶವ ಕಂಡ ಕೂಡಲೇ ವಿದ್ಯಾರ್ಥಿಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಜೆಎನ್ ಯು ಪೊಲೀಸರು ಶವದ ಮಹಜರು ಮಾಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಎಬಿವಿಪಿ ಸಂಘಟನೆಯೊಂದಿಗೆ ಜಗಳ ಮಾಡಿಕೊಂಡಿದ್ದ ನಜೀಬ್ ಅಹ್ಮದ್ ಎಂಬಾತ ಕೂಡ ಈ ಹಿಂದೆ ನಾಪತ್ತೆಯಾಗಿದ್ದ. ಈ ಹಿನ್ನಲೆಯ ಆತನಮ ಪೋಷಕರು ಹಾಗೂ ವಿದ್ಯಾರ್ಥಿಗಳು ಕಳೆದ ಅಕ್ಟೋಬರ್ 15ರಂದು ಭಾರಿ ಪ್ರತಿಭಟನೆ ನಡೆಸಿದ್ದರು. ಇದೇ ಕಾರಣಕ್ಕೆ ವಿವಿಯ ಉಪಕುಲಪತಿಗಳನ್ನು ಹಾಗೂ ಇತರೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ಕೊಠಡಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


